Bengaluru City
ಜೆಡಿಎಸ್ ಶಾಸಕ ಎಂ.ಸಿ ಮನಗೂಳಿ ನಿಧನ

ಬೆಂಗಳೂರು/ವಿಜಯಪುರ: ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ(85) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಗೂಳಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ಶಾಸಕರು 15 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
1994ರಲ್ಲಿ ಸಚಿವರಾಗಿದ್ದ ಮನಗೂಳಿ 2018ರಲ್ಲಿ ತೋಟಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು. ಸಿಂದಗಿ ಕ್ಷೇತ್ರದಿಂದ 7 ಬಾರಿ ಸ್ಪರ್ಧೆ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
