ಚಿಕ್ಕಬಳ್ಳಾಪುರ: 2024ರ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಅಖಂಡ ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರಿಂದ ಯಾವುದೇ ತಕರಾರಿರುವುದಿಲ್ಲ. ಬಿಜೆಪಿ ಜೊತೆ ಮೈತ್ರಿಗೆ ನಮ್ಮ ಸಹಮತ ಇರುವುದಾಗಿ ಜೆಡಿಎಸ್‌ನ (JDS) ಹಾಲಿ ಹಾಗೂ ಮಾಜಿ ಶಾಸಕರು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ನಗರದ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರ ಜೆಕೆ ಭವನದಲ್ಲಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ, ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದ ಶಾಸಕ ಮೇಲೂರು ರವಿಕುಮಾರ್, ಗೌರಿಬಿದನೂರು ಕ್ಷೇತ್ರದ ಜೆಡಿಎಸ್ ಮುಖಂಡ ಜೆಡ್.ಪಿ ನರಸಿಂಹಮೂರ್ತಿ ಸೇರಿದಂತೆ ಹಲವು ನಾಯಕರು ಸಭೆ ನಡೆಸಿ ಮಾತನಾಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಜೆಡಿಎಸ್ ವರಿಷ್ಠರ ನಡೆಗೆ ನಮ್ಮ ಸಮ್ಮತಿ ಇದೆ. ಇದಕ್ಕೆ ಯಾರ ವಿರೋಧವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ’ಕೆಂದಾವರೆ’ ಫಸ್ಟ್ ಲುಕ್ ರಿಲೀಸ್- ಹೊಸಬರ ತಂಡಕ್ಕೆ ಅಶ್ವಿನಿ ಪುನೀತ್ ಸಾಥ್
ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಮಾತನಾಡಿ, ಜೆಡಿಎಸ್ ವರಿಷ್ಠರ ಈಗಾಗಲೇ ನಮ್ಮ ಸಹಮತದ ಅಭಿಪ್ರಾಯದ ಬಗ್ಗೆ ತಿಳಿಸಲಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಹುತೇಕ ಫಿಕ್ಸ್ ಆಗಲಿದೆ. ಆದರೆ ಯಾವ-ಯಾವ ಕ್ಷೇತ್ರ ನಮಗೆ ಬಿಟ್ಟುಕೊಡಬೇಕು ಎಂಬುದು ತೀರ್ಮಾನವಾಗಿಲ್ಲ. ಈ ಬಗ್ಗೆ ವರಿಷ್ಠರು ಚರ್ಚೆ ನಡೆಸಿ ತೀರ್ಮಾನ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ
ಇನ್ನೂ ಶಿಡ್ಲಘಟ್ಟ ಹಾಲಿ ಶಾಸಕ ಮೇಲೂರು ರವಿಕುಮಾರ್ ಮಾತನಾಡಿ, 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎರಡೂ ಜಿಲ್ಲೆಯ ನಾಯಕರು ಒಮ್ಮತದಿಂದ ಸಹಮತ ವ್ಯಕ್ತಪಡಿಸುತ್ತೇವೆ. ನಾವು ಬಿಜೆಪಿಗೆ ಸಪೋರ್ಟ್ ಅಂತ ಹೇಳುವುದಲ್ಲ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ. ಹಾಗಾಗಿ ಈ ಭಾಗದಲ್ಲಿ ಬಿಜೆಪಿ ನಮಗೆ ಸಪೋರ್ಟ್ ಮಾಡಲಿದೆ. ಹಾಗಾಗಿ ನಮ್ಮ ವರಿಷ್ಠರ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ ಅಂತ ಸ್ಪಷ್ಟಪಡಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]