ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷ ಹುಟ್ಟಿರುವುದೇ ಕುಟುಂಬ ರಾಜಕಾರಣ ಮಾಡುವುದಕ್ಕೆ. ಕುಟುಂಬ ರಾಜಕಾರಣದಿಂದಲೇ ನಿಖಿಲ್ ಕುಮಾರಸ್ವಾಮಿ ಹಾಗೂ ಎಚ್.ಡಿ ದೇವೇಗೌಡ ಸೋತರು ಎಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಪುಟ್ಟಸ್ವಾಮಿ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ. ಸುಧಾಕರ್ ಪರ ಪುಟ್ಟಸ್ವಾಮಿ ಚುನಾವಣಾ ಪ್ರಚಾರ ಸಭೆಗೆ ಇಳಿದಿದ್ದರು. ಈ ವೇಳೆ ಅವರು ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ ಕುಮಾರಸ್ವಾಮಿ ಹಾಗೂ ಅವರ ಸಹೋದರ ರೇವಣ್ಣ ಅಘೋಷಿತ ಸಿಎಂ, ಸಂಬಂಧಿಗಳಾದ ತಮ್ಮಣ್ಣ ಹಾಗೂ ಸಾರಾ ಮಹೇಶ್ ಸಚಿವರಾದರು. ಹೀಗಾಗಿ ಜೆಡಿಎಸ್ ಪಕ್ಷ ಜಾತ್ಯಾತೀತ ತತ್ವಗಳಿಗೆ ಅವಮಾನ ಮಾಡಿದೆ ಎಂದರು.
Advertisement
Advertisement
ಅಲ್ಲದೆ ಪಕ್ಷವನ್ನು ನಂಬಿದ ಜನರೇ ಜೆಡಿಎಸ್ ಬಗ್ಗೆ ಅಸಹ್ಯಪಡುತ್ತಿದ್ದು, ನಿಖಿಲ್ ಹಾಗೂ ಎಚ್.ಡಿ ದೇವೇಗೌಡ ಅವರನ್ನು ಸೋಲಿಸಿದರು. ಮುಂದಿನ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಅಧೋಗತಿಗೆ ತಲುಪಲಿದೆ ಎಂದು ಹೇಳಿದರು.
Advertisement
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಪುಟ್ಟಸ್ವಾಮಿ, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಏಕಾಂಗಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ವಲಸಿಗ ಕಾಂಗ್ರೆಸ್ಸಿಗರು ಎರಡು ಭಾಗಗಳಾಗಿವೆ. ಉಪಚುನಾವಣಾ ಪ್ರಚಾರಕ್ಕೆ ಮೂಲ ಕಾಂಗ್ರೆಸ್ಸಿಗರು ಬರುತ್ತಿಲ್ಲ. ಈ ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗಳಿಸಲಿದ್ದು, ಇದರಿಂದ ವಿರೋಧ ಪಕ್ಷದ ನಾಯಕ ಸ್ಥಾನ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದರೂ ಆಶ್ಚರ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.