ಹಾಸನ: ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ಗೆದ್ದು ಶಾಸಕರಾಗಿರುವುದರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ನಂತರ ಮಾತನಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಕೆ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Advertisement
ಜಿ.ಟಿ.ದೇವೇಗೌಡರು ಪಕ್ಷ ಬಿಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಬಳಿ ರಾಜೀನಾಮೆ ಬಗ್ಗೆ ಮಾತನಾಡಿಲ್ಲ. ದೇವೇಗೌಡರ ಬಳಿ ಮಾತನಾಡಿರಬಹುದು. ಆದರೂ ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ಗೆದ್ದು ಶಾಸಕರಾಗಿರುವುದರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು, ನಂತರ ಮಾತನಾಡಲಿ. ಪಕ್ಷದಲ್ಲಿ ಇದ್ದುಕೊಂಡು ಮಾತನಾಡುವುದು ಬೇಡ. ನಾವೇನು ಅವರನ್ನು ಕಳುಹಿಸುತ್ತಿಲ್ಲ, ನಾವು ಯಾರನ್ನೂ ಕಳುಹಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ
Advertisement
Advertisement
ಅವರು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ನೈತಿಕತೆಗಿಂತ ಅವರ ಮಗನ ರಾಜಕೀಯ ಭವಿಷ್ಯಕ್ಕಾಗಿ ಕಾಯುತ್ತಿದ್ದಾರೆ. ನಮಗೆ ದೇವೇಗೌಡರು ಒಬ್ಬರೇ ಹೈಕಮಾಂಡ್. ಅಸಮಾಧಾನವಿದ್ದರೆ ಅವರ ಬಳಿ ಮಾತನಾಡಲಿ. ಅವರಿಗೆ ಸಚಿವ ಸ್ಥಾನ ನೀಡಿದ್ದೇವೆ. ಒಂದೇ ಜಿಲ್ಲೆಗೆ ಮೂರು ಸಚಿವ ಸ್ಥಾನ ನೀಡಿದೆ. ಈಗಲೂ ಕಾಲ ಮಿಂಚಿಲ್ಲ, ದೇವೇಗೌಡರ ಬಳಿ ಬಂದು ಮಾತನಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.