ಹಾಸನ: ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಅವರ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ರೀತಿಯ ಆಟಗಳನ್ನು ಆಡುತ್ತಿರಬಹುದು. ಆದರೆ ನೀವು ಪಕ್ಷಕ್ಕೆ ನಿಷ್ಟರಾಗಿ ಇರುವುದಾದರೆ ಇರಬಹುದು. ದ್ವಂದ್ವ ನಿಲುವು ತೆಗೆದುಕೊಂಡು ಕಾರ್ಯಕರ್ತರನ್ನು ಅಧೀರರನ್ನಾಗಿ ಮಾಡಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜಿ.ಟಿ ದೇವೇಗೌಡ ನಡೆ ಬಗ್ಗೆ ಆಕ್ರೋಶ ಹೊರಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಜಿಟಿಡಿ ಅವರ ಮನಸ್ಸಿಗೆ ಬಂದಂತೆ ಮಾತನಾಡುವ ಹೇಳಿಕೆಗಳು ನಮ್ಮ ಪಕ್ಷಕ್ಕೆ ಮುಜುಗರ ತಂದಿವೆ. ಇಲ್ಲೂ ಇದ್ದು ಅಲ್ಲೂ ಇರೋ ಕೆಲಸ ಮಾಡೋದು ಬೇಡ. ಇದು ಅಶಿಸ್ತಿನ ಪರಮಾವಧಿ. ಅವರಿಗೆ ಇನ್ನೂ ಯಾವುದೇ ನೋಟೀಸ್ ಕೊಟ್ಟಿಲ್ಲ. ಆದರೆ ಅವರ ನಡವಳಿಕೆ ಗಮನಿಸುತ್ತಿದ್ದೇವೆ ಎಂದು ಕಿಡಿಕಾರಿದ್ದಾರೆ.
Advertisement
Advertisement
ಮೊದಲು ಅವರ ದೇಹ ಇಲ್ಲಿತ್ತು. ಮನಸ್ಸು ಅಲ್ಲಿತ್ತು. ಈಗ ದೇಹ ಮತ್ತು ಮನಸ್ಸು ಎರಡೂ ಬಿಜೆಪಿ ಜೊತೆ ಇದೆ. ಎಂಎಲ್‍ಸಿ ಚುನಾವಣೆಯಲ್ಲಿ ಗುಪ್ತ ಮತದಾನ ಇತ್ತು. ವಿಪ್ ನೀಡಿರಲಿಲ್ಲ. ಮುಂದೆ ರಾಜ್ಯಸಭಾ ಚುನಾವಣೆ ಇದೆ. ಆ ಸಂದರ್ಭದಲ್ಲಿ ಕಾನೂನು ಕಟ್ಟಲೆ ಅನುಸರಿಸಿ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ನಾನೇ ನನ್ನ ಸ್ವಂತ ಶಕ್ತಿಯಿಂದ ಗೆದ್ದಿದಿನಿ ಎನ್ನುವ ಭಾವನೆ ಇರಬಹುದು. ಯಾವುದೇ ಸಮಸ್ಯೆ ಇದ್ರೆ ನಮ್ಮ ನಾಯಕರ ಜೊತೆ ಮಾತಾಡಿ ಬಗೆ ಹರಿಸಿ ಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಇದೇ ವೇಳೆ ಭವಿಷ್ಯದಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಚುಕ್ಕಾಣಿ ಹಿಡಿಯಲು, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಸಹಾಯ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಶಾಂತ್ ಕಿಶೋರ್ ಕರೆಸುವ ಬಗ್ಗೆ ಯೋಚಿಸಿರುವುದು ನಿಜ. ಆದರೆ ಪ್ರಶಾಂತ್ ಕಿಶೋರ್ ಭೇಟಿ ಮಾಡಿಲ್ಲ. ಹೆಚ್.ಡಿ ಕುಮಾರಸ್ವಾಮಿ ಪ್ರಶಾಂತ್ ಕಿಶೋರ್ ಬಗ್ಗೆ ಮನಸ್ಸು ಮಾಡಿದ್ದಾರೆ. ಅನುಕೂಲ ಆಗೋದಾದ್ರೆ ಯಾರೇ ಸಲಹೇ ಸೂಚನೆ ನೀಡಿದ್ರು ಸ್ವಾಗತ ಎಂದು ತಿಳಿಸಿದರು.