ಗದಗ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಅವರ ವಿರುದ್ಧ ಪತ್ರದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಇಂದು (ಮಂಗಳವಾರ) ಗದಗ (Gadaga) ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ಮಾಡಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ (ADGP Chandrashekhar) ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿ ಚಂದ್ರಶೇಖರ್ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ
Advertisement
Advertisement
ಹೆಚ್‌ಡಿಕೆ ವಿರುದ್ಧ ಅಸಂವಿಧಾನಿಕ ಪದ ಬಳಕೆ ಚಂದ್ರಶೇಖರ್ ಅವರು ಮಾಡಿದ್ದಾರೆ. ಇಂತಹ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿಗೆ ಹಾಗೂ ನಾಡಿನ ಜನತೆಗೆ ಕೂಡಲೆ ಕ್ಷಮೆ ಕೇಳಬೇಕು. ಅಧಿಕಾರಿಯಾಗಿದ್ದು ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಭ್ರಷ್ಟಾಚಾರ ಆರೋಪ ಬಗ್ಗೆ ತನಿಖೆ ಆಗಬೇಕೆಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು. ಇದನ್ನೂ ಓದಿ: ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್
Advertisement
Advertisement
ನಂತರ ಗದಗ ತಹಶೀಲ್ದಾರ್ ಮೂಲಕ ರಾಜ್ಯಪಾಲರು, ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ, ಬಸವರಾಜ್ ಅಪ್ಪನ್ನವರ್, ಸಂತೋಷ್ ಪಾಟೀಲ, ಪ್ರಫುಲ್ ಪುಣೇಕರ್, ದೇವಪ್ಪ ಮಲ್ಲಸಮುದ್ರ, ರಮೇಶ್ ಹುಣಶಿಮರದ, ಕುಮಾರ್ ಜಿಗಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: 14 ಸೈಟ್ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು