ಬೆಂಗಳೂರು: ಕೊಳಕುಮಂಡಲ ಕಾಂಗ್ರೆಸ್ಗೆ (Congress) ಅಜೆರ್ಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಇದರಿಂದ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಎಂದು ಜೆಡಿಎಸ್ (JDS) ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಾಕಿ ವ್ಯಂಗ್ಯವಾಡಿದೆ.
ಕಳೆದೊಂದು ವಾರದಿಂದ ಹೆಚ್ಡಿಕೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ಇದನ್ನೂ ಓದಿ: ಓವರ್ಟೇಕ್ ಭರದಲ್ಲಿ ಕಂದಕಕ್ಕೆ ಬಿದ್ದ ಬಸ್ – 38 ಮಂದಿ ಸಾವು
Advertisement
ಇನೊಬ್ಬರು ಹೇಳಿದ್ದನ್ನು ತಿರುಚಿ ವಕ್ರೀಕರಿಸುವ ‘ವಿಕೃತಿ ವಿಕಾರಪೀಡಿತʼ ಕಾಂಗ್ರೆಸ್ಸಿಗೆ, ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಅದೇ ಅದರ ಧರ್ಮ. ಕಂಡ ಕಂಡವರ ಭೂಮಿಗೆ ಬೇಲಿ ಹಾಕುವ ‘ಕಿಡಿಗೇಡಿಕುಮಾರ’ನ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ.6/8
— Janata Dal Secular (@JanataDal_S) November 15, 2023
Advertisement
ದರಬೇಸಿ ಕಾಂಗ್ರೆಸ್ಸಿಗೆ ಈಗ ದಾರಿ ಕಾಣುತ್ತಿಲ್ಲ. ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ ಶಿಖಂಡಿ ಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಪಾಪ ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ. ಕುಮಾರಸ್ವಾಮಿ ಅವರು ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್ ವಿಕೃತಿ ಮಿತಿಮೀರಿದೆ. ಬೆಸ್ಕಾಂ ವಿದ್ಯುತ್ ವೇಗದಲ್ಲಿ ಎಫ್ ಐಆರ್ ದಾಖಲಿಸಿದೆ. ಹೆಚ್ಡಿಕೆ ತಿಹಾರ್ ಜೈಲಿಗೆ ಹೋಗುವ ತಪ್ಪೇನೂ ಮಾಡಿಲ್ಲ ಎಂದು ಕಾಂಗ್ರೆಸ್ನ್ನು ತಿವಿದಿದೆ.
Advertisement
Advertisement
ಕುಮಾರಸ್ವಾಮಿ (H.D Kumaraswamy) ಅವರನ್ನು ಈಡಿ, ಸಿಬಿಐ, ಐಟಿ ಬೆನ್ನು ಹತ್ತಿಲ್ಲ. ಪುಡಿರೌಡಿ ಕಿಡಿಗೇಡಿಕುಮಾರನ ಕೈಚಳಕಕ್ಕೆ ಹೆದರುವ ಪ್ರಶ್ನೆಯೂ ಇಲ್ಲ. ರಾಜ್ಯವನ್ನೇ ಗುಡಿಸಿ ಗುಂಡಾಂತರಿಸಿ ತಿಪ್ಪೆ ಸಾರಿಸಿದೆ ಲಜ್ಜೆಗೇಡಿ ಕಾಂಗ್ರೆಸ್. ವೈಎಸ್ಟಿ ಹಾಗೂ ಎಸ್ಎಸ್ಟಿ ಟ್ಯಾಕ್ಸ್ ಕಾಸಿಗಾಗಿ ಪೋಸ್ಟಿಂಗ್, ಸಿಎಂ ಕಚೇರಿಯಲ್ಲಿ ಸುಲಿಗೆ, ಗುತ್ತಿಗೆದಾರರಿಂದ ಪಸರ್ಂಟೇಜ್, ಸ್ಟಾನ್ಲಿ ಸೋಫಾ-ಮಂಚ, ಹ್ಯುಬ್ಲೆಟ್ ವಾಚು, ಒಂದಾ ಎರಡಾ? ಐಷಾರಾಮಯ್ಯನ ಮುಖ ಉಳಿಸಲು ಗುಜರಿ ಶಾಪ್ ಕಾಂಗ್ರೆಸ್ ಕರೆಂಟ್ ವೈರ್ ಹಿಡಿದು ಕೆಟ್ಟಿದೆ. ಹೇಳಿದ್ದನ್ನು ತಿರುಚಿ ವಕ್ರೀಕರಿಸುವ ವಿಕೃತಿ ವಿಕಾರಪೀಡಿತ ಕಾಂಗ್ರೆಸ್ಸಿಗೆ, ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಅದೇ ಅದರ ಧರ್ಮ. ಕಂಡ ಕಂಡವರ ಭೂಮಿಗೆ ಬೇಲಿ ಹಾಕುವ ಕಿಡಿಗೇಡಿಕುಮಾರನ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ ಎಂದು ಜೆಡಿಎಸ್ ತೀವ್ರವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.
ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕ್ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು ಶಕುನಿ ಯುದ್ಧ ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ. ಕಂಬದ ಕರೆಂಟ್ ಬಗ್ಗೆ ಕಾಂಗ್ರೆಸ್ ಈ ಪರಿ ಕೈಕೈ ಹಿಸುಕಿಕೊಳ್ಳುತ್ತಿರುವುದನ್ನು ನೋಡಿದರೆ ವೈರಿನಲ್ಲಿಯೂ ನರಿ ರಾಜಕೀಯ ದಿಟವೆನಿಸುತ್ತದೆ. ಕುಮಾರಸ್ವಾಮಿ ಅವರ ಒಂದೇ ಒಂದು ಕ್ಷಿಪಣಿ ಸಾಕು, ಕಾಂಗ್ರೆಸ್ ರಕ್ಕಸ ರಿಪಬ್ಲಿಕ್ ಉಡೀಸ್ ಆಗಲಿಕ್ಕೆ. ಶಿಖಂಡಿ ಅಂತ್ಯಕಾಲ ಆರಂಭವಾಗಿದೆ ಎಂದು ಜೆಡಿಎಸ್ ಎಕ್ಸ್ನಲ್ಲಿ ಹೇಳಿಕೊಂಡಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಗೆದ್ದಿದ್ದೇನೆ, ಹಾಗಂತ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ? – ಬಿಜೆಪಿಗರಿಗೆ ಎಸ್ಟಿಎಸ್ ತಿರುಗೇಟು