ಬೆಂಗಳೂರು: ನಮ್ಮವರು 14 ಜನ ಅವರ ಜತೆ ಇದ್ದರೆ, ನನ್ನ ಜೊತೆ 28 ಜನ ಬಿಜೆಪಿ ಶಾಸಕರಿದ್ದಾರೆ. ಇದನ್ನು ಶೋಭಾ ಕರಂದ್ಲಾಜೆ ಅವರಿಗೆ ತಿಳಿಸಿಬಿಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಯಡಿಯೂರಪ್ಪ ಬಹುಮತ ಸಾಬೀತು ಮಾಡಲು ಸಾಧ್ಯವಿಲ್ಲ. ಯಡಿಯೂರಪ್ಪ ಸೋಲುತ್ತಾರೆ. ನಾವು ಸರ್ಕಾರ ರಚನೆ ಮಾಡುತ್ತೇವೆ ಇದು ಪಕ್ಕಾ. ಆದರೆ ಯಾರೂ ಯಾರನ್ನು ಭೇಟಿ ಮಾಡದೇ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರು ನಮ್ಮ ಜೊತೆ ಜೆಡಿಎಸ್ ಶಾಸಕರು 14 ಮಂದಿ ಇದ್ದಾರೆ ಎಂದು ಹೇಳಿದ್ದರು. ಈ ಮಾತಿಗೆ ಕುಮಾರಸ್ವಾಮಿಯವರು ನಮ್ಮವರು 14 ಜನ ಅವರ ಜತೆ ಇದ್ರೆ, ನನ್ನ ಜೊತೆ 28 ಜನ ಬಿಜೆಪಿ ಶಾಸಕರಿದ್ದಾರೆ. ಇದನ್ನು ಶೋಭಾಗೆ ತಿಳಿಸಿಬಿಡಿ ಎಂದು ತಿರುಗೇಟು ನೀಡಿದ್ದಾರೆ.