ರಾಮನಗರ: ಜೆಡಿಎಸ್‍ನ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಂದಿನಿಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ.
ಕನಕಪುರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು ಮುಂದಿನ ಚುನಾವಣೆಗೆ ಕನಕಪುರದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ದೂಂತೂರು ವಿಶ್ವನಾಥ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿಯವರ ಬಳಿ ಇಲ್ಲಸಲ್ಲದ ಪಿತೂರಿ ನಡೆಸಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು.
Advertisement
ಕನಕಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಎರಡೂ ಸಹ ಒಂದೇ ಆಗಿವೆ. ಅಲ್ಲದೇ ಪಕ್ಷದಲ್ಲಿ ಈ ಬಾರಿಯೂ ಸಹ ದೂಂತೂರು ವಿಶ್ವನಾಥ್‍ಗೆ ಟಿಕೆಟ್ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿದ್ದೇನೆ. ಚನ್ನಪಟ್ಟಣ ಶಾಸಕ ಸಿಪಿ ಯೋಗೇಶ್ವರ್ ನೇತೃತ್ವದಲ್ಲಿ ಹಲವಾರು ಜನ ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಅವರು ತಿಳಿಸಿದರು.