ಬೆಂಗಳೂರು: ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಫಿಟ್ ನೆಸ್ ಚಾಲೆಂಜ್ ಹಾಕಿದ್ದರು. ಆದರೆ ಈಗ ಮಗನಿಗೆ ಚಾಲೆಂಜ್ ಹಾಕಿದ್ದರಿಂದ ಈಗ ಅಪ್ಪ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನ ವರಿಷ್ಠ ಅಧಿಕಾರಿ ಎಚ್.ಡಿ. ದೇವೇಗೌಡರು ಕಸರತ್ತು ಮಾಡುತ್ತಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಅಧಿಕಾರಕ್ಕೆ ಸಹ ಬಂದಾಗಿದೆ. ಈಗ ಮತ್ತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ `ಆರೋಗ್ಯ’ದ ಅಖಾಡಕ್ಕಿಳಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ದೇವೇಗೌಡರು ಯೋಗಾಭ್ಯಾಸ ನಿಲ್ಲಿಸಿದ್ದರು. ಆದರೆ ಹೆಚ್‍ಡಿಕೆಗೆ ಮೋದಿ ಸವಾಲು ಹಾಕುತ್ತಿದ್ದಂತೆ ಮತ್ತೆ ಯೋಗಾಭ್ಯಾಸ ಶುರು ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಸವಾಲಿಗೆ ಟಾಂಗ್ ನೀಡಿ ಉತ್ತರ ಕೊಟ್ಟ ಎಚ್‍ಡಿಕೆ
Advertisement
ಜೂನ್ 21ರ ಯೋಗ ದಿನದಂದು ದೇವೇಗೌಡರಿಂದ ಮೆಗಾ ಯೋಗಾ ಶೋ ನಡೆಯಲಿದೆ. ಶ್ರೀಜಯ ಸರಸ್ವತಿ ಯೋಗಾ ಕೇಂದ್ರದಿಂದ ಯೋಗ ಗುರು ಕಾರ್ತಿಕ್ ಪಟೇಲ್ ರಿಂದ ದೇವೇಗೌಡರ ಯೋಗ ಶೋ ಆಯೋಜನೆಗೊಂಡಿದೆ. ಪ್ರತಿದಿನ ಬೆಳಗ್ಗೆ 7.30 ರಿಂದ 8.30ರ ತನಕ ದೇವೇಗೌಡರು ಯೋಗಾಭ್ಯಾಸ ಮಾಡುತ್ತಿದ್ದಾರೆ.
Advertisement
ಏನಿದು ಫಿಟ್ ನೆಸ್ ಚಾಲೆಂಜ್:
ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22ರಂದು,“ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit) ನೀವು ನಿಮ್ಮ ಫಿಟ್ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.
Advertisement
ವಿರಾಟ್ ಕೊಹ್ಲಿ ಸವಾಲು ಸ್ವೀಕರಿಸಿದ ನಂತರ ಅದನ್ನು ಪ್ರಧಾನಿ ಮೋದಿಯವರಿಗೆ ಸವಾಲು ಹಾಕಿದ್ದರು. ನಂತರ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಫಿಟ್ನೆಸ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದರು. ಸವಾಲನ್ನು ಸ್ವೀಕರಿಸಿದ ಮೋದಿಯವರು ಸಿಎಂ ಕುಮಾರಸ್ವಾಮಿ ಹಾಗೂ ಅಂತರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾರ್ತಿ ಮಣಿಕ ಬಾತ್ರಾ ಅವರಿಗೆ ಚಾಲೆಂಜ್ ನೀಡಿದ್ದರು.
Advertisement
ಮೋದಿಯವರು ತಮ್ಮ ಫಿಟ್ನೆಸ್ ವಿಡಿಯೋ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದರು. ಮೋದಿ ವಿಡಿಯೋ ಹಾಕಿ ಅದ್ದಕ್ಕೆ, “ಇದು ನನ್ನ ಬೆಳಗ್ಗಿನ ವ್ಯಾಯಾಮಗಳು. ಯೋಗ ಹೊರತಾಗಿ ಪಂಚಭೂತಗಳಾದ ಪೃಥ್ವಿ, ಜಲ, ಅಗ್ನಿ, ವಾಯು ಹಾಗೂ ಆಕಾಶದಿಂದ ಪ್ರೇರಣೆಗೊಂಡು ನಾನು ಟ್ರ್ಯಾಕ್‍ಗಳ ಮೇಲೆ ನಡೆಯುತ್ತೇನೆ. ಇದರ ಜೊತೆ ನಾನು ಉಸಿರಾಟದ ವ್ಯಾಯಾಮವನ್ನು ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.
ವಿಡಿಯೋ ಅಪ್ಲೋಡ್ ಮಾಡಿದ ನಂತರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಶ್ರೀ ಹೆಚ್.ಡಿ ಕುಮಾರಸ್ವಾಮಿ ಹಾಗೂ ಭಾರತದ ಹೆಮ್ಮೆಯ ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಈ ಚಾಲೆಂಜ್ ನೀಡಿದ್ದರು.