ಬೆಂಗಳೂರು: ವಿಧಾನ ಪರಿಷತ್‌ಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದ್ದು, ಶರವಣ ಅವರಿಗೆ ಟಿಕೆಟ್ ನೀಡಿರುವುದಾಗಿ ತಿಳಿಸಿದೆ.
ಶರವಣ ಅವರ ಹೆಸರನ್ನು ಶಾಸಕಾಂಗ ಸಭೆಯಲ್ಲಿ ಘೋಷಿಸಲಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಪಕ್ಷದ ಶಾಸಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದನ್ನೂ ಓದಿ: ಬಿಜೆಪಿ ಪರಿಷತ್ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್
Advertisement
Advertisement
ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು ಶರವಣ ಆಶೀರ್ವಾದ ಪಡೆದರು. ನಂತರ ಕುಮಾರಸ್ವಾಮಿ ಹಾಗೂ ಸಿಎಂ ಇಬ್ರಾಹಿಂ ಇಬ್ಬರೂ ಶರವಣ ಅವರಿಗೆ ಬಿ ಫಾರಂ ನೀಡಿದರು.
Advertisement
ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಸಮಾಲೋಚನೆ ಮಾಡಿ ಶರವಣ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರಗೆ ಶಾಕ್ – ಮೇ 20ರಂದೇ ಸುಳಿವು ನೀಡಿದ್ದ ಪ್ರಧಾನಿ ಮೋದಿ
Advertisement
ನಾಮಪತ್ರ ಸಲ್ಲಿಕೆ ಬಳಿಕ ವಿಧಾನ ಪರಿಷತ್ ಜೆಡಿಎಸ್ ಅಭ್ಯರ್ಥಿ ಶರವಣ ಮಾತನಾಡಿ, ಪಕ್ಷ ನಿಷ್ಠೆ ಗಮನಹರಿಸಿ ಎರಡನೇ ಬಾರಿ ವಿಧಾನ ಪರಿಷತ್‌ನಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ಹೆಚ್‌ಡಿಡಿ, ಹೆಚ್‌ಡಿಕೆಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಸಣ್ಣ ಸಮಾಜದಿಂದ ಬಂದಿದ್ದೇನೆ. ಹಾಗಿದ್ದರೂ ಬೆಳೆಯಲು ಅವಕಾಶ ಕೊಟ್ಟಿದ್ದಾರೆ. ನನ್ನ ಜವಾಬ್ದಾರಿ ಇನ್ನಷ್ಟು ಜಾಸ್ತಿಯಾಗಿದೆ. ಕುಮಾರಸ್ವಾಮಿ ಅವರಿಗೆ ಮೂರನೇ ಬಾರಿಗೆ ಪಟ್ಟಾಭಿಷೇಕ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ಬಿಜೆಪಿ ಹಾಗೂ ಕಾಂಗ್ರೆಸ್‌ನ್ನು ಜನರು ತಿರಸ್ಕಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಜನರು ತೊಂದರೆ ಒಳಗಾಗಿದ್ದಾರೆ. ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸದೆ ಅಧಿಕಾರಿಗಳ ಮೂಲಕ ಆಡಳಿತ ನಡೆಸಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ. ಜನರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ. ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಜೆಡಿಎಸ್ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.