ಬೆಂಗಳೂರು: ಹಾಸನದಲ್ಲಿ ಸಮಾವೇಶ ಮಾಡಿ ದೇವೇಗೌಡ (HD Deve Gowda) ಕುಟುಂಬದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್‌ಗೆ (Congress) ಕೌಂಟರ್ ಕೊಡಲು ದೇವೇಗೌಡರೇ ಅಖಾಡಕ್ಕೆ ಇಳಿದಿದ್ದಾರೆ. ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಮಾಡಿ ವಿರೋಧಿಗಳಿಗೆ ಸಂದೇಶ ಕೊಡಲು ದೇವೇಗೌಡರು ಸಿದ್ಧತೆ ಮಾಡಿದ್ದಾರೆ.
ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು, ಮೇ ತಿಂಗಳಲ್ಲಿ ಜೆಡಿಎಸ್‌ನಿಂದ ದೊಡ್ಡ ಸಮಾವೇಶ ಮಾಡುತ್ತೇವೆ. ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅವರು ಹಾಸನದಲ್ಲಿ ಸಮಾವೇಶ ಮಾಡಿದ್ದರು.ನಾವು ಕೂಡಾ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವರಾಜ್ ಅರಸುರವರ ದಾಖಲೆ ಸರಿಗಟ್ಟುತ್ತಾರೆ: ಕೆಎನ್ ರಾಜಣ್ಣ
Advertisement
Advertisement
ಮೇನಲ್ಲಿ ನಡೆಯುವ ಸಮಾವೇಶಕ್ಕೆ ಮಾರ್ಚ್ 6ರಂದು ಪೂರ್ವಭಾವಿ ಸಭೆ ಮಾಡುತ್ತೇವೆ. ಪೂರ್ವಭಾವಿ ಸಭೆಯಲ್ಲಿ ಎಲ್ಲಾ ಜಿಲ್ಲಾ, ತಾಲೂಕು ಅಧ್ಯಕ್ಷರು, ಹಾಲಿ, ಮಾಜಿ, ಶಾಸಕರು, ಸಚಿವರು, ಸಂಸದಸರು ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಅಂದು ಎಲ್ಲಿ ಸಮಾವೇಶ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ
Advertisement