ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕದಿದ್ದರೆ ಸಮ್ಮಿಶ್ರ ಸರ್ಕಾರದ ಜೆಡಿಎಸ್ ಅಭ್ಯರ್ಥಿ ಗೆಲ್ಲುವ ಬಗ್ಗೆ ಸ್ವತಃ ಕಾಂಗ್ರೆಸ್ ಮುಖಂಡರೇ ಅನುಮಾನ ವ್ಯಕ್ತಪಡಿಸುತ್ತಿರುವುದು ಮೈತ್ರಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಹೌದು, ಮಂಡ್ಯ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಕಾಂಗ್ರೆಸ್ ಮತ್ತು ಜೆಡಿಸ್ ಪಕ್ಷಗಳೆರೆಡು ಪರಸ್ಪರ ವಿರೋಧಿಗಳಾಗಿಯೇ ಇದುವರೆಗೂ ಚುನಾವಣೆಯನ್ನು ಎದುರಿಸಿಕೊಂಡು ಬಂದಿವೆ. ಹೀಗಿರುವಾಗ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಮಾತ್ರ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿದರೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಒಲವು ತೋರಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‍ಗೆ ಮತ ಹಾಕುವವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.
Advertisement
Advertisement
ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದರೆ ಸಮ್ಮಿಶ್ರ ಸರ್ಕಾರದ ಜೆಡಿಎಸ್ ಅಭ್ಯರ್ಥಿ ಮಂಡ್ಯದಲ್ಲಿ ಗೆಲುವು ಸಾಧಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಹ ನಿಲ್ಲಿಸಿ ಎಂದು ಸ್ವತಃ ಕಾಂಗ್ರೆಸ್ ಮುಖಂಡರೇ ಪಕ್ಷದ ವರಿಷ್ಠರಿಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Advertisement
ಸ್ವತಃ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಎಚ್ಚರಿಕೆ ಮಾತುಗಳನ್ನು ಹೇಳುತ್ತಿರುವುದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮಂಡ್ಯ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯ ಆಯ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv