ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರಕ್ಕೆ ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಬಿಜೆಪಿ ಸಂಸದರಿಗೆ ಧಮ್, ತಾಕತ್ತು ಇಲ್ಲ ಎಂದು ಲೇವಡಿ ಮಾಡಿದೆ.
ಟ್ವೀಟ್‌ನಲ್ಲಿ ಏನಿದೆ?
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಕನ್ನಡದ ಜಲ-ನೆಲ-ಧನ ಬಳಸಿ ಕಟ್ಟಿದ ಸಂಸ್ಥೆಯಲ್ಲಿ ಕನ್ನಡಿಗರ ದುಸ್ಥಿತಿ ಇದು. ಬಿಜೆಪಿ ಸಂಸದರೇ ಇದರ ಬಗ್ಗೆ ಪ್ರಶ್ನೆ ಮಾಡಲು ನಿಮಗೆ ಧಮ್-ತಾಕತ್ತು ಇಲ್ಲವೆ?
Advertisement
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಕನ್ನಡದ ಜಲ-ನೆಲ-ಧನ ಬಳಸಿ ಕಟ್ಟಿದ ಸಂಸ್ಥೆಯಲ್ಲಿ ಕನ್ನಡಿಗರ ದುಸ್ಥಿತಿ ಇದು. @BJP4Karnataka ದ ಸಂಸದರೇ ಇದರ ಬಗ್ಗೆ ಪ್ರಶ್ನೆ ಮಾಡಲು ನಿಮಗೆ ಧಮ್ಮು – ತಾಕತ್ತು ಇಲ್ಲವೆ?1/3 pic.twitter.com/5MdjvJzl1B
— Janata Dal Secular (@JanataDal_S) March 7, 2023
Advertisement
ಉತ್ತರದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಈ ವಂಚನೆ ನಮ್ಮ ಮೂಗಿನ ಕೆಳಕ್ಕೆ ನಡೆಯುತ್ತಿದೆ. ಉತ್ತರದವರ ಮುಂದೆ ಬೇಡಲು ನಾವೇನು ಅವರ ಗುಲಾಮರೆ? ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ ಹೊರತು ಭಿಕ್ಷೆಯಲ್ಲ. ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಲಾಭವಾಗಲಿದೆ ಎಂದು ಬಿಜೆಪಿಯವರು ಬೊಬ್ಬೆ ಹಾಕುತ್ತಿದ್ದರು. ಆದರೆ ಈಗ ನಮ್ಮ ಮಕ್ಕಳಿಗೆ ಮೋಸವಾಗುತ್ತಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಡಾಳ್ ಮನೆಗೆ ವಾಪಸ್ – ತೆರೆದ ವಾಹನದಲ್ಲಿ ಮೆರವಣಿಗೆ
Advertisement
ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಲಾಭವಾಗಲಿದೆ ಎಂದು @BJP4India ಬೊಬ್ಬೆ ಹಾಕುತ್ತಿದ್ದರು. ಆದರೆ, ಈಗ ನಮ್ಮ ಮಕ್ಕಳಿಗೆ ಮೋಸವಾಗುತ್ತಿದೆ. ಸಿಎಂ @BSBommai ಅವರೆ, ಈ ಅನ್ಯಾಯವನ್ನು @narendramodi ಅವರ ಗಮನಕ್ಕೆ ತನ್ನಿ. ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ? ಅಧಿಕಾರದ ಕೊನೆಯಲ್ಲಾದರೂ ಸ್ವಾಭಿಮಾನಿಯಾಗಿ ಧ್ವನಿ ಎತ್ತಿ.3/3
— Janata Dal Secular (@JanataDal_S) March 7, 2023
Advertisement
ಸಿಎಂ ಬೊಮ್ಮಾಯಿ ಅವರೇ, ಈ ಅನ್ಯಾಯವನ್ನು ನರೇಂದ್ರ ಮೋದಿ ಅವರ ಗಮನಕ್ಕೆ ತನ್ನಿ. ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ? ಅಧಿಕಾರದ ಕೊನೆಯಲ್ಲಾದರೂ ಸ್ವಾಭಿಮಾನಿಯಾಗಿ ಧ್ವನಿ ಎತ್ತಿ ಎಂದು ಜೆಡಿಎಸ್ ಕಿಡಿಕಾರಿದೆ. ಇದನ್ನೂ ಓದಿ: ಬಡವರ ಪರವಾಗಿ ನನ್ನ ಹೃದಯ ಮಿಡಿಯುತ್ತದೆ: ಬಸವರಾಜ ಬೊಮ್ಮಾಯಿ