ಬೆಂಗಳೂರು: ಸಚಿವ ಸಂಪುಟ ರಚನೆ ಮಾಡದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಜೆಡಿಎಸ್ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಜೆಡಿಎಸ್ ತನ್ನ ಟ್ವಿಟ್ಟರಿನಲ್ಲಿ, “ರಾಜ್ಯದಾದ್ಯಂತ ಬರ ಹಾಗೂ ಕೆಲವೆಡೆ ನೆರೆಯ ಪರಿಸ್ಥಿತಿ ಇದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದು ವಾರವಾದರೂ ಮಂತ್ರಿಮಂಡಲವನ್ನೂ ರಚಿಸದೇ ಕಾಲಹರಣ ಮಾಡುವ ಮೂಲಕ ಸರ್ಕಾರದ ಆಡಳಿತ ಯಂತ್ರವನ್ನೇ ಸ್ಥಗಿತಗೊಳಿಸಲು ಮುಂದಾಗಿದ್ದಾರೆ. ರಾಜ್ಯದ ಜನಸಾಮಾನ್ಯರ ಪಾಲಿಗೆ ಇದು ಒಂಥರಾ ‘ಅತೃಪ್ತ ಆತ್ಮಗಳ’ ಸರ್ಕಾರವಾಗಿದೆ” ಎಂದು ಟ್ವೀಟ್ ಮಾಡಿದೆ.
Advertisement
ರಾಜ್ಯದಾದ್ಯಂತ ಬರ ಹಾಗೂ ಕೆಲವೆಡೆ ನೆರೆಯ ಪರಿಸ್ಥಿತಿ ಇದೆ. ಆದರೆ ಮುಖ್ಯಮಂತ್ರಿ @BSYBJP ಅವರು ಒಂದು ವಾರವಾದರೂ ಮಂತ್ರಿಮಂಡಲವನ್ನೂ ರಚಿಸದೇ ಕಾಲಹರಣ ಮಾಡುವ ಮೂಲಕ ಸರ್ಕಾರದ ಆಡಳಿತ ಯಂತ್ರವನ್ನೇ ಸ್ಥಗಿತಗೊಳಿಸಲು ಮುಂದಾಗಿದ್ದಾರೆ.
ರಾಜ್ಯದ ಜನಸಾಮಾನ್ಯರ ಪಾಲಿಗೆ ಇದು ಒಂಥರಾ 'ಅತೃಪ್ತ ಆತ್ಮಗಳ' ಸರ್ಕಾರವಾಗಿದೆ.
— Janata Dal Secular (@JanataDal_S) August 2, 2019
Advertisement
ಇತ್ತ ಕಾಂಗ್ರೆಸ್ ಕೂಡ ತನ್ನ ಟ್ವಿಟ್ಟರಿನಲ್ಲಿ, “ಹಿಂಬಾಗಿಲ ಸಿಎಂ ಯಡಿಯೂರಪ್ಪ ಅವರೇ, ಎಲ್ಲಿ ನಿಮ್ಮ ಸಚಿವ ಸಂಪುಟ? ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಅಧಿಕಾರ ಹಂಚಿಕೆಯ ಕಿತ್ತಾಟಕ್ಕೆ ರಾಜ್ಯದ ಜನತೆಗೆ ಏಕೆ ತೊಂದರೆ ಕೊಡುತ್ತಿರುವಿರಿ? ಆಡಳಿತ ಯಂತ್ರವನ್ನು ಸ್ಥಗಿತಗೊಳಿಸಿರುವಿರೇಕೆ? ಮಂತ್ರಿಗಳಿಗಾಗಿ, ಅಭಿವೃದ್ಧಿಯ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.
Advertisement
ಹಿಂಬಾಗಿಲ ಸಿಎಂ @BSYBJP ಅವರೇ
ಎಲ್ಲಿ ನಿಮ್ಮ ಸಚಿವ ಸಂಪುಟ?
ಆರೆಸ್ಸೆಸ್ ಮತ್ತು ಬಿಜೆಪಿಯ ಅಧಿಕಾರ ಹಂಚಿಕೆಯ ಕಿತ್ತಾಟಕ್ಕೆ ರಾಜ್ಯದ ಜನತೆಗೆ ಏಕೆ ತೊಂದರೆ ಕೊಡುತ್ತಿರುವಿರಿ?
ಆಡಳಿತ ಯಂತ್ರವನ್ನು ಸ್ಥಗಿತಗೊಳಿಸಿರುವಿರೇಕೆ? ಮಂತ್ರಿಗಳಿಗಾಗಿ, ಅಭಿವೃದ್ಧಿಯ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು?
— Karnataka Congress (@INCKarnataka) August 2, 2019
Advertisement
ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪನವರಿಗೆ ಕರೆ ಮಾಡಿ, ಆಗಸ್ಟ್ 9ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆಗೆ ಸಂಪುಟ ರಚನೆಗೆ ಮುನ್ನ ಆಗಸ್ಟ್ 7ರಂದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.