ರಾಯಚೂರು: ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್‌ಕುಮಾರ್ ಸೊರಕೆ (Vinay Kumar Sorake) ಹೇಳಿದ್ದಾರೆ.
ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಅಭ್ಯರ್ಥಿ ಗೆಲ್ಲೋದು ಕಷ್ಟ. ದೇವೇಗೌಡರ ಅಳಿಯ ಬಿಜೆಪಿಯಲ್ಲಿ ನಿಂತಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತೆ. ಆಗ ಕುಮಾರಸ್ವಾಮಿ ಜೆಡಿಎಸ್‌ಗೆ ಕೊನೆಮೊಳೆ ಹೊಡೆಯುತ್ತಾರೆ. ಜೆಡಿಎಸ್, ಬಿಜೆಪಿ ಜೊತೆ ವಿಲೀನ ಆಗೋ ಲಕ್ಷಣ ಕಾಣುತ್ತಿವೆ ಎಂದರು. ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ – ಮೂವರು ದುರ್ಮರಣ
ಪ್ರಜ್ವಲ್ ರೇವಣ್ಣನನ್ನು (Prajwal Revanna) ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂಬ ಮಾಹಿತಿ ನಮಗೆ ಬಂದಿದೆ. ಚಾಲಕನಿಗೆ ಯಾರಾದ್ರೂ ವಿಡಿಯೋ ಕೊಟ್ಟಿರಬೇಕಲ್ಲಾ, ಕುಮಾರಸ್ವಾಮಿ ಕೊಟ್ಟಿದ್ದಾರೆ ಅನ್ನೋ ಮಾಹಿತಿ ಬಂದಿದೆ ಎಂದು ಹೇಳಿದರು. ಇದನ್ನೂ ಓದಿ: ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ: ರಾಹುಲ್ ಗಾಂಧಿ
ಹತ್ತು ವರ್ಷದಲ್ಲಿ ಮೋದಿ ಅವರ ಸಾಧನೆ ಏನು? ಸಂತೆಯಲ್ಲಿ ಜಾನುವಾರುಗಳನ್ನು ಖರೀದಿ ಮಾಡೋ ರೀತಿ ಶಾಸಕರನ್ನ ಖರೀದಿ ಮಾಡುತ್ತಿದ್ದಾರೆ. ಗೋವಾ, ಮಹಾರಾಷ್ಟ್ರದಲ್ಲಿ ಆಯಿತು. ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ಧಮನ ಮಾಡುತ್ತಿದ್ದಾರೆ. ಹತ್ತು ವರ್ಷದಲ್ಲಿ ಸುಮಾರು 400 ಶಾಸಕರನ್ನ ಖರೀದಿ ಮಾಡಿದ್ದಾರೆ. ಚುನಾವಣೆ ವೇಳೆ ಎರಡೆರಡು ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಜರ್ಮನಿಯಿಂದ ದುಬೈಗೆ ಬಂದಿಳಿದ ಪ್ರಜ್ವಲ್ ರೇವಣ್ಣ
ಬಿಜೆಪಿ ಆಡಳಿತದಲ್ಲಿ ಬಡತನ, ಬೆಲೆ ಏರಿಕೆ, ನಿರುದ್ಯೋಗ ಕಾಣುತ್ತಿವೆ. ನೋಟು ಬ್ಯಾನ್, ಜಿಎಸ್‌ಟಿ ಮೂಲಕ ಅನಾನುಕೂಲ ಆಯಿತೇ ಹೊರತು ಪ್ರಯೋಜನವಾಗಿಲ್ಲ. ನೀರಾವರಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರ ಪರಿಹಾರವನ್ನು ಸರಿಯಾಗಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರಜ್ವಲ್ ಮೊಬೈಲ್‍ನಿಂದ ವೀಡಿಯೋ ಲೀಕ್ ಆಗಿದ್ದೇ ರೋಚಕ!