ಮಂಡ್ಯ: ಇಲ್ಲಿನ ಪಾಂಡವಪುರ (Pandavapura) ಪುರಸಭೆಯ ಉಪಚುನಾವಣೆಯಲ್ಲಿ ಜೆಡಿಎಸ್ (JDS) ಅಭ್ಯರ್ಥಿಗಳು ಗೆಲುವು ಪಡೆದಿದ್ದು, ಕಾಂಗ್ರೆಸ್ (Congress) ಹಾಗೂ ರೈತಸಂಘಕ್ಕೆ ಮುಖಭಂಗವಾಗಿದೆ.
ಪಾಂಡವಪುರ ಪುರಸಭೆಯ 2 ಮತ್ತು 9ನೇ ವಾರ್ಡ್‍ಗೆ ಡಿ.27ರಂದು ಉಪಚುನಾವಣೆ ನಡೆದಿತ್ತು. ಇದರ ಫಲಿತಾಂಶ ಬಂದಿದ್ದು, ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಯಶವಂತ್ ಹಾಗೂ ಜ್ಯೋತಿಯವರು ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ರೈತಸಂಘ ಒಟ್ಟಾಗಿ ಎದುರಿಸಿತ್ತು. ಇದೀಗ ಫಲಿತಾಂಶದಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿದೆ. ಇದನ್ನೂ ಓದಿ: ಅತ್ಯಾಧುನಿಕ ಅಯೋಧ್ಯೆ ರೈಲು ನಿಲ್ದಾಣಕ್ಕೆ ನಮೋ ಚಾಲನೆ – ಏನಿದರ ವಿಶೇಷತೆ?
ಕಳೆದ ವಿಧಾನಸಭೆ ಚುನಾವಣೆ ಸೋಲು ಕಂಡಿದ್ದ ಜೆಡಿಎಸ್‍ಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪಾಂಡವಪುರ ಪುರಸಭೆಯ ಉಪಚುನಾವಣೆಯಿಂದ ಆತ್ಮವಿಶ್ವಾಸ ಹೆಚ್ಚಾಗಿದೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಜೆಡಿಎಸ್ ಚುನಾವಣೆ ಎದುರಿಸಿದ್ದು, ಉಪಚುನಾವಣೆ ಗೆಲುವಿನಿಂದ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ರಾಮ ನಮ್ಮ ಅಭ್ಯರ್ಥಿ ಅಂತಾ ಘೋಷಿಸೋದು ಒಂದೇ ಬಾಕಿ: ಸಂಜಯ್ ರಾವತ್