ಮತ್ತೆ ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

Public TV
1 Min Read
ramanagar cp yogeshwar car egg

ರಾಮನಗರ: ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ (Car) ಜೆಡಿಎಸ್ (JDS) ಕಾರ್ಯಕರ್ತರು ಮೊಟ್ಟೆ (Egg) ಎಸೆದು ಆಕ್ರೋಶವನ್ನು ಹೊರಹಾಕಿದ್ದಾರೆ.

ಸಿ.ಪಿ.ಯೋಗೇಶ್ವರ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ನಡುವೆ ನಡೆದ ಜಟಾಪಟಿಯಿಂದಾಗಿ ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಮಾಡಿ ಮೊಟ್ಟೆ ಎಸೆದು ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಅಡ್ಡಿ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಜೆಡಿಎಸ್‌ಗೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಕೊನೆಗೂ ಪೋಲಿಸ್ ಭದ್ರತೆಯಲ್ಲಿ ಯೋಗೇಶ್ವರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ramanagar egg

ಘಟನೆಯೇನು?: ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಸಿಎಂ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ವಿಶೇಷ ಅನುದಾನಕ್ಕಾಗಿ ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಇಂದು ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ಸಿ.ಪಿ. ಯೋಗೇಶ್ವರ್ ಕೋರಿಕೆ ಮೇರೆಗೆ ಬಿಡುಗಡೆಯಾಗಿರುವ ವಿಶೇಷ ಅನುದಾನ ಎಂದು ಮುದ್ರಣವಾಗಿತ್ತು. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ

jds logo

ಈ ಹಿನ್ನೆಲೆಯಲ್ಲಿ ಸಿಪಿ.ಯೋಗೇಶ್ವರ್ ನಡೆಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆಂದು ಕಿಡಿಕಾರಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರು. ಇದನ್ನೂ ಓದಿ: ದೇಶದಲ್ಲಿ 5G ಸೇವೆಗೆ ಚಾಲನೆ – ಯಾವ ನಗರಗಳಲ್ಲಿ ಆರಂಭದಲ್ಲಿ ಸಿಗುತ್ತೆ? ಎಷ್ಟು ಸ್ಪೀಡ್ ಇರುತ್ತೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *