– ಮೂವರು ಪ್ರವಾಸಿಗರು ಪಾರು
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್‌ವೊಂದು (Chikkamagaluru) ಸುಮಾರು 40 ಅಡಿ ಎತ್ತರದಿಂದ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು (Jeep Accident) ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಡೆದಿದೆ.
ಚಂದ್ರದ್ರೋಣ ಪರ್ವತದ ಸಾಲಿನ ಝರಿ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು, ಕೇರಳ ಮೂಲದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. 40 ಅಡಿ ಎತ್ತರದಿಂದ ಬಿದ್ದ ರಭಸಕ್ಕೆ ಜೀಪ್ ಸಂಪೂರ್ಣ ನಜ್ಜು-ಗುಜ್ಜಾಗಿದೆ.
ಅದೃಷ್ಟವಶಾತ್ ಚಾಲಕ ಸೇರಿದಂತೆ ಮೂವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಹಾಗೂ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾರೀ ಅನಾಹುತ ತಪ್ಪಿದೆ.ಇದನ್ನೂ ಓದಿ: ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿ ಸಲಗ
ಜೀಪ್ ಬಿದ್ದ ರಭಸಕ್ಕೆ ಕಾರ್ಮಿಕರ ಲೈನ್ ಮನೆಗೂ ಹಾನಿಯಾಗಿದೆ. ಅಪಘಾತಕ್ಕೆ ಜೀಪ್ ಚಾಲಕನ ವೇಗದ ಚಾಲನೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಇದನ್ನೂ ಓದಿ: ಪಿಜಿ ಬಿಲ್ಡಿಂಗ್ ಕುಸಿತ | ಒಂಟಿ ಸೀನು, ಹೋಗಬೇಡ ಅಂದಿದ್ದ ಅಮ್ಮನ ಆತಂಕ ನಿಜವಾಯ್ತು: ಮಗನಿಲ್ಲದೇ ಕಣ್ಣೀರಿಟ್ಟ ತಾಯಿ
