– ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ (High Court) ಚಾಟಿ ಬೀಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್‌ನೋಟನ್ನ (Death Note) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಸರ್ಕಾರಕ್ಕೆ ಕೋರ್ಟ್ ಚಾಟಿ:
ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP Kanaka Lakshmi) ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ (Death Note) ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ (Jeeva Suicide Case) ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು. ಇದನ್ನೂ ಓದಿ: ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?
Advertisement
ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು. ಮೃತರು 13 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್‌ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿತ್ತು. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತೇನೆ ಎಂದು ಹೇಳಿ ಗರಂ ಆಗಿದೆ. ಇದಕ್ಕೆ ಎಲ್ಲಾ ಪ್ರಕರಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವುದಿಲ್ಲ. ಈ ಪ್ರಕರಣವನ್ನು ಸಿಸಿಬಿಗೆ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲ ಜಗದೀಶ್ ಉತ್ತರಿಸಿದರು. ಡಿವೈಎಸ್‌ಪಿ ಕನಕಲಕ್ಷ್ಮಿ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ಕಿರುಕುಳ ನೀಡಿಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಬರಲಿ. ಕನಕಲಕ್ಷ್ಮಿ ಲಾಟರಿ ಹಗರಣದಲ್ಲಿದ್ದರು ಎಂದು ಇವರು ಆರೋಪ ಮಾಡುವುದು ಸರಿಯಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ನವೆಂಬರ್ 29ಕ್ಕೆ ಕಾಯ್ದಿರಿಸಿದೆ.
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಲಿವ್ ಇನ್ ಗೆಳತಿಯ ಮೇಲೆ ರೇಪ್; 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿರಾತಕ