ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.
Advertisement
ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ ವಿದ್ಯುತ್ ಗುತ್ತಿಗೆದಾರ ಪ್ರೇಮಕುಮಾರ ಎಂಬವರಿಗೆ ಹೊಸ ಮನೆಯ ಆರ್ ಆರ್ ನಂಬರ್ ನೀಡಲು 10 ಸಾವಿರ ಲಂಚ ಕೇಳಿದ್ದ. ಈಗಾಗಲೇ 5 ಸಾವಿರ ರೂಪಾಯಿ ನೀಡಿದ್ದ ಗುತ್ತಿಗೆದಾರ, ಅಧಿಕಾರಿಯಿಂದ ಬೇಸತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದ.
Advertisement
Advertisement
ಉಳಿದ 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತರ ಬಲೆಗೆ ಬಿದ್ದಬಳಿಕ ಅಧಿಕಾರಿ ಅನಾರೋಗ್ಯದ ಹೈಡ್ರಾಮಾ ಮಾಡಿ ಲಿಂಗಸುಗೂರು ಸರ್ಕಾರಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕಿತ್ಸೆ ಬಳಿಕ ಲೋಕಾಯುಕ್ತ ಅಧಿಕಾರಿಗಳು ಎಇಇ ಕೆಂಚಪ್ಪ ಬಾವಿಮನಿಯನ್ನ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!