ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ (Jet Airways) ಸಂಬಂಧಿಸಿದ 500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಪಡಿಸಿಕೊಂಡಿದೆ.
ವಶಪಡಿಸಿಕೊಳ್ಳಾದ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ನ ಸಂಸ್ಥಾಪಕ ನರೇಶ್ ಗೋಯಲ್ (Naresh Goyal), ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ, ಭಾರತದ ಕೆಲವು ರಾಜ್ಯಗಳಲ್ಲಿನ ಕಂಪನಿಗಳ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್‌ಗಳು, ಬಂಗಲೆಗಳು, ವಾಣಿಜ್ಯ ಕಟ್ಟಡಗಳು ಸೇರಿವೆ. ಇದನ್ನೂ ಓದಿ: ವಿಪಕ್ಷ ನಾಯಕರ ಮೊಬೈಲ್‌ಗೆ ಹ್ಯಾಕಿಂಗ್ ಎಚ್ಚರಿಕೆ – ಆಪಲ್ ಅಧಿಕಾರಿಗಳ ವಿಚಾರಣೆಗೆ ಸಂಸದೀಯ ಸ್ಥಾಯಿ ಸಮಿತಿ ನಿರ್ಧಾರ
Advertisement
Advertisement
ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ (Money Laundering Case) ತಡೆ ಕಾಯ್ದೆ ಅಥವಾ ಪಿಎಂಎಲ್‌ಎ-2002ರ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಜಪ್ತಿ ಮಾಡಿದೆ. ಗೋಯಲ್ ಕುಟುಂಬಸ್ಥರ ಹೊರತಾಗಿ ಕೆಲವು ಆಸ್ತಿಗಳನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.
Advertisement
ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇ.ಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಎಫ್‌ಐಆರ್‌ನಲ್ಲಿ ಬ್ಯಾಂಕ್, ಜೆಟ್ ಏರ್‌ವೇಸ್‌ಗೆ 848 ಕೋಟಿ ರೂ. ವರೆಗಿನ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ. ಅದರಲ್ಲಿ 538 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್
Advertisement
ಗೋಯಲ್ ಅವರನ್ನು ಪಿಎಂಎಲ್‌ಎ ಅಡಿಯಲ್ಲಿ ಸೆಪ್ಟೆಂಬರ್ 1 ರಂದು ಇ.ಡಿ ಬಂಧಿಸಿತ್ತು. ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.
Web Stories