ಮಡಿಕೇರಿ: ವಧುವಿಗೆ ತೊಡಿಸಲೆಂದು ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (Gold jewellery) ಮದುವೆ ಮನೆಯಲ್ಲೇ ಕಳ್ಳತನವಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ರೈತ ಭವನದಲ್ಲಿ ನಡೆದಿದೆ.
ಸಂಬಂಧಿಕರ ಸೋಗಿನಲ್ಲಿ ಬಂದ ಯುವಕನಿಂದಲೇ ಕಳ್ಳತನ ಆಗಿದೆ. ಅಂದಾಜು 45,000 ರೂ. ಮೌಲ್ಯದ ಚಿನ್ನ, 50 ಸಾವಿರ ರೂ. ಮೌಲ್ಯದ ಚಿನ್ನದ ಕಡಗ, 23,000 ಮೌಲ್ಯದ ಒಂದು ಜೊತೆ ಚಿನ್ನದ ಓಲೆ, ಜೊತೆಗೆ 5,000 ರೂ. ಕದ್ದು ಪರಾರಿಯಾಗಿದ್ದಾನೆ ಎಂದು ವಧುವಿನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಡಿ.1 ರಿಂದ ಒಟಿಪಿ ಬರುತ್ತಾ? ಬರಲ್ವಾ? – ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಟ್ರಾಯ್
ಘಟನೆ ಸಂಬಂಧ ಕುಶಾಲನಗರ ನಗರ ಠಾಣೆಗೆ ವಧುವಿನ ಪೋಷಕರು ದೂರು ನೀಡಿದ್ದಾರೆ. ನಂತರ ಮದುವೆ ಮಂಟಪಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ. ಮುಂದಿನ ತನಿಖೆ ಕೈಗೊಂಡಿದ್ದು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಒಳ್ಳೆಯ ರಾಜಕಾರಣದ ಬಗ್ಗೆ ಮಾನ ಮರ್ಯಾದೆ ಇರುವವರ ಬಳಿ ಪ್ರಶ್ನೆ ಕೇಳಿ – ಯತ್ನಾಳ್ ಟಾಂಗ್