CrimeLatestMain PostNational

ಅಪ್ರಾಪ್ತನಿಂದ ಬಾಲಕಿಯ ಮೇಲೆ ಅತ್ಯಾಚಾರ

ರಾಂಚಿ: ಅಪ್ರಾಪ್ತ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್‍ನ ಖುಂತಿ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್‍ನ ಖುಂತಿ ಜಿಲ್ಲೆಯ 5 ವರ್ಷದ ಬಾಲಕಿಯು ತನ್ನ ಮನೆಯ ಸಮೀಪದ ಅಂಗಡಿಯೊಂದರಲ್ಲಿ ಕೊಲ್ಡ್‌ ಡ್ರಿಂಕ್ಸ್ ಖರೀದಿಸಲು ಹೋಗಿದ್ದಳು. ಆಗ ಆ ಅಂಗಡಿಯಲ್ಲಿ 12 ವರ್ಷದ ಬಾಲಕನೊಬ್ಬನನ್ನು ಬಿಟ್ಟು ಬೇರೆ ಯಾರು ಇರಲಿಲ್ಲ. ಈ ಸಂದರ್ಭದಲ್ಲಿ ಬಾಲಕಿಯ ಮೇಲೆ ಆತ ಅತ್ಯಚಾರವೆಸಗಿದ್ದಾನೆ.

ಈ ಪ್ರಕರಣ ತೋರ್ಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಜನರನ್ನು ಬೆಚ್ಚಿಬಿಳಿಸಿದೆ. ಘಟನೆಗೆ ಸಂಬಂಧಿಸಿ ಬಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಹೇಳಿದ್ದಾರೆ. ಬಾಲಕನನ್ನು ರಾಂಚಿಯ ಬಾಲಪರಾಧ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಪತ್ನಿ ಸಂಬಳ ನೀಡದಿದ್ದಕ್ಕೆ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಪತಿಯಿಂದ ಹಲ್ಲೆ

Leave a Reply

Your email address will not be published.

Back to top button