ನವದೆಹಲಿ: ದೆಹಲಿ ನಿವಾಸದಲ್ಲಿ E.D (ಜಾರಿ ನಿರ್ದೇಶನಾಲಯ) ಕೈಗೆ ಸಿಗದೇ ಜಾರ್ಖಂಡ್ (Jharkhand) ಸಿಎಂ ಹೇಮಂತ್ ಸೊರೆನ್ (Hemant Soren) ನಾಪತ್ತೆಯಾಗಿದ್ದಾರೆ. ಅವರ ನಿವಾಸದ ಮೇಲೆ ದಾಳಿ ನಡೆಸಿದ E.D ಕೆಲವು ದಾಖಲೆಗಳು ಮತ್ತು BMW ಕಾರನ್ನು ವಶಕ್ಕೆ ಪಡೆದಿದೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿಯ (Delhi) ನಿವಾಸದಲ್ಲಿ ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧಕಾರ್ಯ ನಡೆಸಲು ಹೋಗಿದ್ದರು. ಸೊರೆನ್ ಅವರು ಮನೆಯಲ್ಲಿ ಇಲ್ಲದ ಕಾರಣ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅವರು E.D ಅಧಿಕಾರಿಗಳಿಗೆ ಸಿಗದ ಹಿನ್ನೆಲೆ ಕೆಲವು ದಾಖಲೆಗಳನ್ನು ಮತ್ತು BMW ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಡಲ್ಗಳ್ಳರಿಂದ ಅಪಹರಣಕ್ಕೆ ಒಳಗಾಗಿದ್ದ 19 ಪಾಕ್ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ
ಸರ್ಕಾರಿ ಭೂಮಿಯ ಮಾಲೀಕತ್ವವನ್ನು ಬದಲಾವಣೆ ಮಾಡುವುದರಲ್ಲಿ ಬೃಹತ್ ಜಾಲವನ್ನೊಳಗೊಂಡ 600 ಕೋಟಿ ರೂಪಾಯಿ ಮೊತ್ತದ ಹಗರಣ ನಡೆದಿದೆ. ಸರ್ಕಾರಿ ಭೂಮಿಯನ್ನು ಕ್ರಮೇಣ ಬಿಲ್ಡರ್‌ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಪ್ರಕರಣ ಸಂಬಂಧ ಸೊರೆನ್‌ಗೆ ಏಳು ಬಾರಿ ನೋಟಿಸ್ ಜಾರಿಗೊಳಿಸಿತ್ತು. ಇದನ್ನೂ ಓದಿ: ‘ಬಾಯ್ಕಾಟ್ ಮಾಲ್ಡೀವ್ಸ್’ ಎಫೆಕ್ಟ್ – ಮಾಲ್ಡೀವ್ಸ್ ಪ್ರವಾಸ ರ‍್ಯಾಂಕಿಂಗ್‌ನಲ್ಲಿ ನಂ.1 ರಿಂದ 5ನೇ ಸ್ಥಾನಕ್ಕೆ ಕುಸಿದ ಭಾರತ
ಆದರೆ, ಈ ನೋಟಿಸ್‌ಗಳನ್ನು ಅವರು ನಿರ್ಲಕ್ಷಿಸಿದ್ದು, ಜಾರಿ ನಿರ್ದೇಶನಾಲಯದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಸೊರೆನ್ ಅವರು ಹಗರಣದ ಹಣದಲ್ಲಿ ದೆಹಲಿಯಲ್ಲಿ ನಿವಾಸ ಮತ್ತು BMW ಕಾರನ್ನು ಖರೀದಿ ಮಾಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ಬೇಡಿಕೆ ನಿರಾಕರಿಸಿದ್ದಕ್ಕೆ ಸ್ನೇಹಿತನನ್ನೇ ಕೊಲೆಗೈದ 20ರ ಯುವಕ
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 14 ಮಂದಿಯನ್ನು ಬಂಧಿಸಲಾಗಿದೆ. ಐಎಎಸ್ ಅಧಿಕಾರಿ ಛವಿ ರಂಜನ್ ಅವರನ್ನು ಸಹ ಬಂಧಿಸಲಾಗಿದೆ. ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡಿಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ