ಪಾಟ್ನಾ: ಆಗಸ್ಟ್ 30 ರವರೆಗೆ ಪೆರೋಲ್ ಅವಧಿಯನ್ನು ಮುಂದುವರಿಸುವಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಲಾಲು ಪ್ರಸಾದ್ ಅವರಿಗೆ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ಸಂಸ್ಥೆಯಲ್ಲಿ ಇರಿಸಿ ಚಿಕಿತ್ಸೆಯನ್ನು ಮುಂದುವರಿಸಲಾಗುವುದು ಎಂದು ಆರ್‍ಜೆಡಿ ಮುಖ್ಯ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
Advertisement
Fodder scam: Lalu Prasad Yadav's lawyer Prabhat Kumar says, "now he will undergo treatment at Rajendra Institute of Medical Sciences (RIMS) in Ranchi. He will be brought from Mumbai's Asian Heart Institute where he is currently admitted." https://t.co/SZPsgeCfJU
— ANI (@ANI) August 24, 2018
Advertisement
ವೈದ್ಯಕೀಯ ಚಿಕಿತ್ಸೆ ಹಿನ್ನಲೆಯಲ್ಲಿ ಈ ಹಿಂದೆಯೂ ಆಗಸ್ಟ್ 10 ರಿಂದ ಆಗಸ್ಟ್ 20ರವರೆಗೆ ಪೆರೋಲ್ ವಿಸ್ತರಿಸಲಾಗಿತ್ತು. ಈಗ ಮತ್ತೆ 10 ದಿನ ಪೆರೋಲ್ ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು.
Advertisement
2013ರ ಮೇವು ಹಗರಣ ಪ್ರಕರಣ ಪ್ರಮುಖ ಆರೋಪಿಯಾಗಿದ್ದ ಲಾಲು ಪ್ರಸಾದ್ 2017ರಂದು ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಬಿಹಾರದ ಬಿರ್ಸಾ ಮುಂಡಾ ಜೈಲಿನಲ್ಲಿ ಇದ್ದಾಗ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಹೀಗಾಗಿ ಅಲ್ಲಿಯೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಮನವಿ ಸಲ್ಲಿಸಿದ್ದರಿಂದ ಮುಂಬೈನಲ್ಲಿ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv