CrimeLatestMain PostNational

ನಿದ್ರೆ ಮಾಡುತ್ತಿರುವಾಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ರಾಂಚಿ: ಸೋಮವಾರ ಮುಂಜಾನೆ ಜಾರ್ಖಂಡ್‍ನ ಲೋಹರ್ದಗಾ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಮನೆಯಲ್ಲಿ ನಿದ್ರೆ ಮಾಡುತ್ತಿರುವ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುರು ಪೊಲೀಸ್ ಠಾಣಾ ವ್ಯಾಪ್ತಿಯ ಚಟಕ್‍ಪುರ ಗ್ರಾಮದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪ್ರಭಾರಿ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ. ಮೃತರನ್ನು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರತನ್ ಮಹತೋ ಎಂದು ಗುರುತಿಸಲಾಗಿದೆ. ರತನ್ ಅವರು ಮನೆಯಲ್ಲಿ ಮಲಗಿಕೊಂಡಿದ್ದ ಸಮಯದಲ್ಲಿ ಆರೋಪಿಗಳು ಗುಂಡು ಹಾರಿಸಿದ್ದಾರೆ. ಪರಿಣಾಮ ಸ್ಥಳೀಯರು ಸೇರಿಕೊಂಡು ರತನ್ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ 

crime

ಪ್ರಸ್ತುತ ರತನ್ ಅವರ ದೇಹವನ್ನು ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(RIMS) ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ದೇಹವನ್ನು ಕುಟುಂಬಕ್ಕೆ ನೀಡುತ್ತೇವೆಂದು ಹೇಳಿದ್ದಾರೆ.

POLICE JEEP

ಪ್ರಾಥಮಿಕ ತನಿಖೆಯ ಪ್ರಕಾರ ಜಮೀನು ವಿವಾದವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಮಾಡಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ ಇಬ್ಬರು ಆಪಾದಿತ ದಾಳಿಕೋರರು ಯಾರು ಎಂದು ಪೊಲೀಸರು ಗುರುತಿಸಿದ್ದಾರೆ. ಪ್ರಸ್ತುತ ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಹತ್ಯೆಯ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್ 

Leave a Reply

Your email address will not be published.

Back to top button