ಜಾರ್ಖಂಡ್: ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಜಾರ್ಖಂಡ್‌ನ ಬೊಕಾರೊದಲ್ಲಿ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದ ವಾರದ ನಂತರ ವ್ಯಕ್ತಿಯೋರ್ವನ ದೇಹದಲ್ಲಿ ಹೊಸ ರೀತಿಯ ಬದಲಾವಣೆ ಕಾಣಿಸಿಕೊಂಡಿದೆ. ಕಳೆದ ಐದು ವರ್ಷಗಳ ನಂತರ ಆತನಿಗೆ ಮಾತು ಮರಳಿ ಬಂದಿದೆ. ಅಷ್ಟೇ ಅಲ್ಲ, ಆತನ ದೇಹದ ಕೆಲವೊಂದು ಮೂಳೆಗಳು ಕೆಲಸ ಮಾಡಲು ಶುರು ಮಾಡಿವೆ.
Advertisement
Advertisement
ಸಲ್ಗಡಿ ಗ್ರಾಮದ ನಿವಾಸಿಯಾಗಿರವ 55 ವರ್ಷದ ದುಲರ್ ಚಂದ್ ಮುಂಡಾ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇವರು ಚಿಕಿತ್ಸೆಯ ನಂತರ ಗುಣಮುಖರಾಗಿದ್ದರೂ ದೈಹಿಕ ನ್ಯೂನತೆಗಳಿಂದಾಗಿ ಹಾಸಿಗೆ ಹಿಡಿದಿದ್ದರು. ದಿನದಿಂದ ದಿನಕ್ಕೆ ಅವರ ಧ್ವನಿಯೂ ಕ್ಷೀಣಿಸಲು ಶುರುವಾಗಿ ಮಾತನಾಡಲು ತೊದಲುತ್ತಿದ್ದರು. ಜನವರಿ 4ರಂದು ಇವರಿಗೆ ಕೋವಿಡ್ ಮೊದಲ ಡೋಸ್ ಆಗಿ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್
Advertisement
Advertisement
ಇದಾದ ಬಳಿಕ ದೇಹದಲ್ಲಿ ಅನೇಕ ರೀತಿಯ ಬದಲಾವಣೆ ಕಾಣಿಸಿಕೊಂಡಿದ್ದು, ಸ್ಪಷ್ಟವಾಗಿ ಮಾತನಾಡುವುದರ ಜೊತೆಗೆ ಆತನ ದೇಹದ ಕೆಲವೊಂದು ಮೂಳೆಗಳು ಕೆಲಸ ಮಾಡುತ್ತಿವೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವೈದ್ಯಾಧಿಕಾರಿ ಡಾ. ಅಲ್ಬೆಲ್ ಕೆರ್ಕೆಟ್, ಇದೊಂದು ಸಂಶೋಧನೆಯ ವಿಷಯವಾಗಬಹುದು, ನಿಜಕ್ಕೂ ಅವರ ದೇಹದಲ್ಲಿ ಇಷ್ಟೊಂದು ಬದಲಾವಣೆ ಕಂಡು ಬಂದಿರುವುದು ಅಚ್ಚರಿಯಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಿ- ಸರ್ಕಾರ ಆದೇಶ