– ಕಾಂಗ್ರೆಸ್ ಪಕ್ಷದಲ್ಲಿ ಒಂದು ಕುಟುಂಬ ಮಾತ್ರ ಬೆಳೆಯುತ್ತಿದೆ ಎಂದ ಗೀತಾ ಕೋರಾ
ರಾಂಚಿ: ಲೋಕಸಭಾ ಚುನಾವಣೆಗೆ (Lok Sabha Elections) ದಿನಗಳು ಬಾಕಿಯಿರುವ ಹೊತ್ತಿನಲ್ಲೇ ಕಾಂಗ್ರೆಸ್‌ನ ಪ್ರಮುಖ ಶಾಸಕರು, ಸಂಸದರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ತಮಿಳುನಾಡಿನ ಶಾಸಕಿ ಎಸ್.ವಿಜಯಧರಣಿ ಬಿಜೆಪಿ ಸೇರ್ಪಡೆಯಾಗಿದ್ದರು. ಈ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ (Jharkhand) ಕಾಂಗ್ರೆಸ್ ಸಂಸದೆ ಬಿಜೆಪಿ ಸೇರಿದ್ದಾರೆ.
Advertisement
ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿ ಹಾಗೂ ಸಿಂಗ್‌ಭೂಮ್ (ST ಮೀಸಲು) ಕ್ಷೇತ್ರದ ಕಾಂಗ್ರೆಸ್ ಸಂಸದೆ ಗೀತಾ ಕೋಡಾ (Geeta Kora) ಅವರು ಸೋಮವಾರ ಇಲ್ಲಿನ ರಾಜ್ಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Advertisement
ಬಳಿಕ ಮಾತನಾಡಿರುವ ಗೀತಾ ಕೋಡಾ, ತುಷ್ಟೀಕರಣ ರಾಜಕಾರಣ ಮಾಡುವ ಮೂಲಕ ಕಾಂಗ್ರೆಸ್ ಈ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅದಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: TMC ಪ್ರಭಾವಿ ಶೇಖ್ ಷಹಜಹಾನ್ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
Advertisement
ಒಂದು ಪಕ್ಷ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕರೆದೊಯ್ಯುತ್ತದೆ ಎಂದು ಹೇಳುತ್ತಾರೆ. ಆದ್ರೆ ಕಾಂಗ್ರೆಸ್ ಒಂದು ಕುಟುಂಬವನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
2019ರ ಲೋಕಸಭೆ ಚುನಾವಣೆಯಲ್ಲಿ ಜಾರ್ಖಂಡ್‌ನ 14 ಸಂಸದೀಯ ಸ್ಥಾನಗಳ ಪೈಕಿ ಬಿಜೆಪಿ-ಎಜೆಎಸ್‌ಯು ಮೈತ್ರಿಕೂಟ 12ರಲ್ಲಿ ಗೆಲುವು ಸಾಧಿಸಿತ್ತು. ಇದನ್ನೂ ಓದಿ: ಧ್ರುವ್ ರಥೀ ವಿಡಿಯೋ ಪೋಸ್ಟ್ ಮಾಡಿ ತಪ್ಪು ಮಾಡಿದ್ದೇನೆ – ಸುಪ್ರೀಂನಲ್ಲಿ ಕೇಜ್ರಿವಾಲ್ ತಪ್ಪೊಪ್ಪಿಗೆ