ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿಎಸ್‌ಪಿ ಮೇಲೆ ಟ್ರಕ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದ ಬೆನ್ನಲ್ಲೇ, ಜಾರ್ಖಂಡ್‌ನಲ್ಲಿ ತಪಾಸಣೆಗೆ ಮುಂದಾದ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ವಾಹನದಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಾಹನ ತಪಾಸಣೆ ವೇಳೆ ಸಂಧ್ಯಾ ಟೋಪ್ನೋ ಹೆಸರಿನ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಧ್ಯಾ ಅವರನ್ನು ತೂಪುದಾನ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ- ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ
Advertisement
Advertisement
ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆಗೆ ಎಸ್‌ಐ ಸಂಧ್ಯಾ ಅವರು ಮುಂದಾಗಿದ್ದಾರೆ. ಈ ವೇಳೆ ವಾಹನ ನಿಲ್ಲಿಸದೆ ಚಾಲಕ, ಅಧಿಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ರಾಂಚಿ ಹಿರಿಯ ಸೂಪರಿಂಟೆಂಡೆಂಟ್ ಪೊಲೀಸ್ ತಿಳಿಸಿದ್ದಾರೆ.
Advertisement
ಆರೋಪಿಯನ್ನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಕ್ಷೇತ್ರದ ಉದ್ಯೋಗಿಗಳಿಗೆ ಗುಡ್‌ನ್ಯೂಸ್: ವರ್ಕ್ ಫ್ರಂ ಹೋಮ್ – ಹೊಸ ನಿಯಮ ಹೇಳೋದೇನು ಗಮನಿಸಿ
Advertisement
ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಬ್ಬರು ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.