ರಾಂಚಿ: ಹಣೆಗೆ ಬಿಂದಿ (Bindi) ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು (Student) ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ (Dhanbad) ನಡೆದಿದೆ.
ಘಟನೆಯ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (NCPCR) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ, ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದಕ್ಕೆ ಆಕೆಯನ್ನು ಥಳಿಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ ಎಂದು ಟ್ವೀಟ್ (Tweet) ಮೂಲಕ ತಿಳಿಸಿದ್ದಾರೆ. ಅಲ್ಲದೇ ಘಟನೆಯ ಕುರಿತು ತನಿಖೆ ನಡೆಸಲು ಎನ್‌ಸಿಪಿಸಿಆರ್ ತಂಡವು ಧನ್‌ಬಾದ್‌ಗೆ ತೆರಳಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ ಸ್ವೀಕರಿಸಿದ್ದೇನೆ, ಸಸ್ಯಾಹಾರಿ ಜೀವನಶೈಲಿ ಅನುಸರಿಸ್ತೇನೆ – ಪ್ರೇಮಿಗಾಗಿ ಬದಲಾದ ಪಾಕ್ ಮಹಿಳೆ
Advertisement
Advertisement
ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರು ತನಿಖೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಆರೋಪಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಾರ್ಖಂಡ್‌ನ ಧನ್‌ಬಾದ್ ಮಕ್ಕಳ ಕಲ್ಯಾಣ ಸಮಿತಿ (CWC) ಅಧ್ಯಕ್ಷ ಉತ್ತಮ್ ಮುಖರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: ಪುಟ್ಟ ಕಂದಮ್ಮನ ಕುತ್ತಿಗೆ, ಬಲಗೈ ಕೊಯ್ದ ಪಾಪಿ ತಂದೆ!
Advertisement
Advertisement
ಈ ಕುರಿತು ಮುಖರ್ಜಿ ಟ್ವೀಟ್ ಮಾಡಿದ್ದು, ಇದು ಗಂಭೀರ ವಿಷಯವಾಗಿದ್ದು, ಶಾಲೆಯು ಸಿಬಿಎಸ್‌ಇ ಮಂಡಳಿಗೆ ಸಂಯೋಜಿತವಾಗಿಲ್ಲ. ನಾನು ಜಿಲ್ಲಾ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತಿಳಿಸಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬವನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಂಗ್ ರೂಟ್‌ನಲ್ಲಿ ಬಂದ ಶಾಲಾ ಬಸ್‌ನಿಂದ ಕಾರಿಗೆ ಡಿಕ್ಕಿ – ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವು
Web Stories