Connect with us

Latest

ರೈಲು ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಫೋಟ: ಬಲಗೈ ಕಳೆದುಕೊಂಡ ಬಾಲಕ

Published

on

ಗಿರಿದಿಹ್(ಜಾರ್ಖಂಡ್): ಕಳೆದ ರಾತ್ರಿ ಜಾರ್ಖಂಡ್ ನ ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದರಿಂದ ಬಾಲಕನೊಬ್ಬ ಎನ್ನ ಬಲಗೈಯನ್ನು ಕಳೆದುಕೊಂಡ ಘಟನೆ ನಡೆದಿದೆ.

ಅವಳಿ ಸ್ಫೋಟದ ಪರಿಣಾಮ ರೈಲ್ವೇ ನಿಲ್ದಾಣದಲ್ಲಿ ಕೆಲಕಲ ಆತಂಕದ ಮತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು. ಗಾಯಗೊಂಡ ಬಾಲಕನನ್ನು ಕೂಡಲೇ ನಗರದ ದನ್ ಬಾದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಫೋಟಕ್ಕೆ ಯಾವ ವಸ್ತು ಬಳಸಲಾಗಿದೆ ಎಂಬುವುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಫೋಟಕ್ಕೆ ಕಾರಣವಾದ ವಸ್ತುವನ್ನು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಸುತ್ತಿ ಎಸೆಯಲಾಗಿತ್ತು.

ಬಾಂಬ್ ಸ್ಫೋಟಗೊಂಡ ರೈಲ್ವೆ ನಿಲ್ದಾಣದ ಮೂಲಕ ದೆಹಲಿಯಿಂದ ಕೋಲ್ಕತ್ತಾಗೆ ಹೋಗುವ ರೈಲುಗಳು ಸಂಚರಿಸುತ್ತವೆ. ಸದ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

Click to comment

Leave a Reply

Your email address will not be published. Required fields are marked *