ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

Public TV
1 Min Read
Jignesh Mevani Kanhaiya Kumar

ಅಹ್ಮದಾಬಾದ್: ಗುಜರಾತ್‍ನಲ್ಲಿ ಪಕ್ಷೇತರ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಹಾಗೂ ಕಮ್ಯೂನಿಸ್ಟ್ ಪಕ್ಷದ ನಾಯಕ ಕನ್ಹಯ್ಯ ಕುಮಾರ್ ಸೆಪ್ಟೆಂಬರ್ 28ರಂದು ಕಾಂಗ್ರೆಸ್ ಸೇರುತ್ತಿರುವ ಕುರಿತು ಘೋಷಿಸಿದ್ದಾರೆ.

ಭಗತ್ ಸಿಂಗ್ ಜನ್ಮದಿನಾಚರಣೆಯಂದು ಕಾಂಗ್ರೆಸ್ ಸೇರಲು ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಗ್ನೇಶ್ ಮೇವಾನಿ ಗುಜರಾತ್‍ನ ವಡ್ಗಮ್ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದಾರೆ. ಜಿಗ್ನೇಶ್ ಕಾಂಗ್ರೆಸ್ ಸೇರುತ್ತಿದ್ದಂತೆ ಗುಜರಾತ್‍ನ ಕಾರ್ಯಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

ಕನ್ಹಯ್ಯ ಕುಮಾರ್ ಈ ಹಿಂದೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷರಾಗಿದ್ದಾರೆ. ಕನ್ಹಯ್ಯ ಅವರ ಜೊತೆಗೆ ಇನ್ನಷ್ಟು ಎಡಪಂಥೀಯ ನಾಯಕರನ್ನು ಕಾಂಗ್ರೆಸ್‍ಗೆ ಸೇರಿಸುವ ನಿರೀಕ್ಷೆ ಇದೆ.

ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಹೊಸ ಯುವ ನಾಯಕರ ಮುಖ ಪರಿಚಯಿಸುವ ಉದ್ದೇಶದಿಂದ ಕಾಂಗ್ರೆಸ್ ಈ ಪ್ರಯೋಗ ಮಾಡುತ್ತಿದೆ. ದೆಹಲಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಹಾರ್ದಿಕ್ ಪಟೇಲ್ ಸಹ ಭಾಗವಹಿಸುತ್ತಿದ್ದಾರೆ.

Share This Article