ಮುಂಬೈ: ರಿಲಯನ್ಸ್ ಜಿಯೋ ಸೋಮವಾರ ತನ್ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 5ಜಿ ಸೇವೆಯನ್ನು ದೀಪಾವಳಿ ಸಂದರ್ಭ ರೋಲ್‌ಔಟ್ ಮಾಡಲು ಪ್ರಾರಂಭಿಸುವುದಾಗಿ ಘೋಷಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ 45 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಭಾರತದಲ್ಲಿ 5ಜಿ ಸೇವೆಗಳನ್ನು ಹೊರತರಲು ರಿಲಯನ್ಸ್ 2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ ಎಂದು ಹೇಳಿದರು.
Advertisement
Advertisement
ಮುಂದಿನ 2 ತಿಂಗಳಲ್ಲಿ ದೀಪಾವಳಿಯ ವೇಳೆಗೆ ಜಿಯೋ 5ಜಿ ಸೇವೆಗಳು ಪ್ರಾರಂಭವಾಗಲಿದೆ. ಮೊದಲಿಗೆ ದೇಶದ 4 ಮೆಟ್ರೋ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾದಲ್ಲಿ ರೋಲ್‌ಔಟ್ ಪ್ರಾರಂಭವಾಗಿ, ಆಯ್ದ ಬಳಕೆದಾರರನ್ನು ತಲುಪಲಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಆಕಾಶ ಏರ್ ಪ್ರಯಾಣಿಕರ ವೈಯಕ್ತಿಕ ಡೇಟಾಗೆ ಕನ್ನ – ಸಂಸ್ಥೆಯಿಂದ ಕ್ಷಮೆ
Advertisement
Advertisement
ಜಿಯೋ 5ಜಿ ವಿಶ್ವದ ಅತಿದೊಡ್ಡ ಹಾಗೂ ಅತ್ಯಾಧುನಿಕ ನೆಟ್‌ವರ್ಕ್ ಆಗಲಿದೆ. 2023ರ ಡಿಸೆಂಬರ್ ವೇಳೆಗೆ ಜಿಯೋ 5ಜಿ ಸೇವೆ ದೇಶದ ಎಲ್ಲಾ ಪಟ್ಟಣ, ತಾಲೂಕು, ಹಳ್ಳಿ, ದೇಶದ ಮೂಲೆ ಮೂಲೆಯನ್ನು ತಲುಪಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದನ್ನೂ ಓದಿ: ಕಿರಿಯ ಪುತ್ರನಿಗಾಗಿ ದುಬೈನಲ್ಲಿ ಅತ್ಯಂತ ದುಬಾರಿ ಮನೆ ಖರೀದಿಸಿದ ಮುಖೇಶ್ ಅಂಬಾನಿ