ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ.
ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
Advertisement
ಈ ಫೋನನ್ನು ಮುಕೇಶ್ ಅಂಬಾನಿ ‘ಭಾರತದ ಇಂಟಲಿಜೆಂಟ್ ಸ್ಮಾರ್ಟ್ ಫೋನ್’ ಎಂದು ಬಣ್ಣಿಸಿದ್ದಾರೆ. ಈ ಫೋನ್ ಬೀಟಾ ಟೆಸ್ಟಿಂಗ್ ಆಗಸ್ಟ್ 15 ರಿಂದ ಆರಂಭವಾಗಲಿದ್ದು, ಆಗಸ್ಟ್ 24ರಿಂದ ಮುಂಗಡ ಬುಕ್ಕಿಂಗ್ ಆರಂಭವಾಗಲಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಈ ಫೋನ್ ಗ್ರಾಹಕರ ಕೈಗೆ ಸಿಗಲಿದೆ.
Advertisement
ಈ ಫೋನಿನಲ್ಲಿ ಜಿಯೋ ಸಿನಿಮಾ, ಸಿನಿಮಾ ಮ್ಯೂಸಿಕ್ ಸೇರಿದಂತೆ ಜಿಯೋ ಆಪ್ಲಿಕೇಶನ್ ಪ್ರಿ ಲೋಡೆಡ್ ಆಗಿ ಇರಲಿದೆ.
Advertisement
ಗುಣವೈಶಿಷ್ಟ್ಯ ಏನು?
ಆಲ್ಫಾ ನ್ಯುಮರಿಕ್ ಕೀಪ್ಯಾಡ್, 2.4 ಇಂಚಿನ ಕ್ಯೂವಿಜಿಎ ಡಿಸ್ಪ್ಲೇ 240*320 ಪಿಕ್ಸೆಲ್, ಎಫ್ ಎಂ ರೇಡಿಯೋ, ಟಾರ್ಚ್ ಲೈಟ್, ಹೆಡ್ ಫೋನ್ ಜ್ಯಾಕ್, ಎಸ್‍ಡಿ ಕಾರ್ಡ್ ಸ್ಲಾಟ್, ಫೋನ್ ಕಾಂಟಾಕ್ಟ್, ಕಾಲ್ ಹಿಸ್ಟರಿ
Advertisement
ಈ ಫೀಚರ್ ಫೋನ್ ಖರೀದಿಸಿದ ಗ್ರಾಹಕರಿಗೆ ತಿಂಗಳಿಗೆ 153 ರೂ. ರಿಚಾರ್ಚ್ ಆಫರ್ ಅನ್ನು ಜಿಯೋ ಬಿಡುಗಡೆ ಮಾಡಿದೆ. ಈ ಆಫರ್ ನಲ್ಲಿ ಗ್ರಾಹಕರಿಗೆ ಆನ್ ಲಿಮಿಟೆಡ್ ಡೇಟಾ ಪ್ಯಾಕ್ ಸಿಗಲಿದೆ. ಅಷ್ಟೇ ಅಲ್ಲದೇ ಎಂದಿನಂತೆ ಹೊರ ಹೋಗುವ ಕರೆಗಳು ಮತ್ತು ಮೆಸೇಜ್ ಗಳು ಉಚಿತವಾಗಿ ಸಿಗಲಿದೆ.
ಕಡಿಮೆ ಬೆಲೆಯಲ್ಲಿ ಯಾಕೆ?
ಜಿಯೋ ಈಗ ಹೊಸ ಗ್ರಾಹಕರನ್ನು ಸೆಳೆಯುಲು ಮಂದಾಗುತ್ತಿದೆ. ಸೆಪ್ಟೆಂಬರ್ ನಲ್ಲಿ ಆರಂಭವಾದ ಬಳಿಕ ನಂತರದ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಗ್ರಾಹಕರು ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಯೋ ಈಗ 2ಜಿ ಸೇವೆಯನ್ನು ಬಳಸುತ್ತಿರುವ ಗ್ರಾಹಕರ ಆಕರ್ಷಿಸಲು ಫೀಚರ್ ಫೋನ್ ತಯಾರಿಸಿದೆ. ಅಷ್ಟೇ ಅಲ್ಲದೇ ಪ್ರಸ್ತುತ ಮಾರುಕಟ್ಟೆಯಲ್ಲಿ 4ಜಿ ಎಲ್‍ಟಿಇ ಬೆಂಬಲಿಸುವ ಫೋನ್ ಗಳಿದ್ದರೂ ಇವುಗಳ ಬೆಲೆ ಜಾಸ್ತಿ ಇರುವ ಕಾರಣ ಜಿಯೋ ಈಗ ಫೋನ್ ತಯಾರಿಸಿದೆ.
ಜಿಯೋ 999 ರೂ.ನಿಂದ ಆರಂಭವಾಗಿ 1500 ರೂ ಒಳಗಡೆ ಕೀ ಪ್ಯಾಡ್ ಹೊಂದಿರುವ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ ಫೀಚರ್ ಫೋನ್‍ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ವರದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಜಿಯೋ ಎಲ್‍ವೈಎಫ್ ಹೆಸರಿನಲ್ಲಿ ಆಂಡ್ರಯ್ಡ್ ಫೋನ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು.
ಏನಿದು ವಾಯ್ಸ್ ಓವರ್ ಎಲ್‍ಟಿಇ? ಉಚಿತ ಕರೆ ಯಾಕೆ?
ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ವೇಗದ ಇಂಟರ್ನೆಟ್ ಇದ್ದರೆ ಮಾತ್ರ ಈ ಸೇವೆಯನ್ನು ಗ್ರಾಹಕರು ಯಶಸ್ವಿಯಾಗಿ ಬಳಸಿಕೊಳ್ಳಬಹುದು. ಹಲವು ಫೋನ್ ಗಳು ಎಲ್‍ಟಿಇ ಬೆಂಬಲಿಸದ ಕಾರಣ ಜಿಯೋ ಸಿಮ್ ಹಾಕಲು ಸಾಧ್ಯವಾಗುತ್ತಿರಲಿಲ್ಲ. ಏರ್ಟೆಲ್ ಮತ್ತು ವೊಡಾಫೋನ್‍ಗಳು ಪ್ರಯೋಗಿಕ ಪರೀಕ್ಷೆ ನಡೆಸುತ್ತಿದ್ದು ಕೆಲ ತಿಂಗಳಿನಲ್ಲಿ ಈ ವೋಲ್ಟ್ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಜಿಯೋ ಸೇವೆ ಆರಂಭವಾದ ಬಳಿಕ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಬಹುತೇಕ ಕಂಪೆನಿಗಳ ಫೋನ್ ಗಳು ಎಲ್‍ಟಿಇ ಟೆಕ್ನಾಲಜಿಯನ್ನು ಬೆಂಬಲಿಸುತ್ತಿದೆ.