ಬೆಂಗಳೂರು: ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ ಜಿಯೋ ಈಗ ಆಂಡ್ರಾಯ್ಡ್ ಸ್ಮಾರ್ಟ್‍ಫೋನ್ ಕ್ಷೇತ್ರದಲ್ಲೂ ಕ್ರಾಂತಿ ಮಾಡಲು ಮುಂದಾಗಿದೆ. ಕಳೆದ ವಾರ ಬಿಡುಗಡೆ ಮಾಡಿದ್ದ ಜಿಯೋ ಫೋನ್ ನೆಕ್ಷ್ಟ್ ಡ್ಯುಯಲ್ ಸಿಮ್ ಫೋನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.
ಜಿಯೋ ನೆಕ್ಷ್ಟ್ ಹೆಸರಿನ ಫೋನಿಗೆ 6,499 ರೂ. ದರವನ್ನು ನಿಗದಿ ಮಾಡಿದೆ. ಆದರೆ 2,499 ರೂ.(1999 ರೂ.+ 500 ರೂ. ಸಂಸ್ಕರಣಾ ಶುಲ್ಕ) ಪಾವತಿಸಿಯೂ ಖರೀದಿಸಬಹುದು. ಬಾಕಿ ಹಣವನ್ನು 18 ಅಥವಾ 24 ತಿಂಗಳಲ್ಲಿ ಪಾವತಿಸಬಹುದು.
ಗೂಗಲ್ ಸಹಯೋಗದೊಂದಿಗೆ ಫೋನ್ ನಿರ್ಮಾಣವಾಗಿದ್ದು ಆಂಡ್ರಾಯ್ಡ್ ಓಎಸ್‍ಗೆ ‘ಪ್ರಗತಿ’ ಎಂದು ಹೆಸರನ್ನಿಟ್ಟಿದೆ. 5.45 ಇಂಚಿನ ಸ್ಕ್ರೀನ್ ಹೊಂದಿರುವ ಫೋನಿಗೆ ಮುಂದುಗಡೆ 8 ಎಂಪಿ, ಹಿಂದುಗಡೆ 13 ಎಂಪಿ ಕ್ಯಾಮೆರಾ, 16 ಜಿಬಿ ಆಂತರಿಕ ಮೆಮೋರಿ, 2 ಜಿಬಿ ರ್ಯಾಮ್, 3500 ಎಂಎಎಚ್ ಬ್ಯಾಟರಿ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಹೊಂದಿದೆ.
ಕನ್ನಡ ಸೇರಿದಂತೆ 10 ಭಾಷೆಯಲ್ಲಿ ಮಾಹಿತಿಯನ್ನು ಪಡೆಯಬಹುದು. ಅಷ್ಟೇ ಅಲ್ಲದೇ ಕನ್ನಡದಲ್ಲೇ ಸಂವಹನ ಮಾಡಬಹುದು. ಫೋನ್ ಖರೀದಿಗೆ ಹತ್ತಿರದ ಜಿಯೋ ಮಾರ್ಟ್ ಡಿಜಿಟಲ್ ರಿಟೇಲರ್ ಅನ್ನು ಭೇಟಿಮಾಡಿ ಅಥವಾ www.jio.com/next ಗೆ ಭೇಟಿ ನೀಡಬಹುದು.
ಆಂಡ್ರಾಯ್ಡ್‌ನಿಂದ ಸಶಕ್ತವಾದ ಪ್ರಗತಿ ಓಎಸ್ ಭಾರತಕ್ಕಾಗಿ ರೂಪಿಸಲಾದ ಒಂದು ವಿಶ್ವದರ್ಜೆಯ ಆಪರೇಟಿಂಗ್ ಸಿಸ್ಟಂ ಆಗಿದ್ದು, ಜಿಯೋಫೋನ್ ನೆಕ್ಸ್ಟ್‌ನ ಹೃದಯದಲ್ಲಿದೆ. ಕೈಗೆಟುಕುವ ಬೆಲೆಯಲ್ಲಿ ನೈಜ ತೊಡಕಿಲ್ಲದ ಅನುಭವವನ್ನು ನೀಡುವುದರೊಂದಿಗೆ ಎಲ್ಲರಿಗೂ ಪ್ರಗತಿ ತರುವ ಉದ್ದೇಶದಿಂದ ಜಿಯೊ ಮತ್ತು ಗೂಗಲ್‌ನ ಅತ್ಯುತ್ತಮ ಪ್ರತಿಭೆಗಳು ಫೋನ್ ರೂಪಿಸಿದ್ದಾರೆ.
ತಂತ್ರಜ್ಞಾನ ಕ್ಷೇತ್ರದ ಇನ್ನೊಂದು ಮುಂಚೂಣಿ ಸಂಸ್ಥೆಯಾದ ಕ್ವಾಲ್‌ಕಾಮ್ ಜಿಯೋಫೋನ್ ನೆಕ್ಸ್ಟ್‌ನ ಪ್ರಾಸೆಸರ್ ಅನ್ನು ರೂಪಿಸಿದೆ. ಸಾಧನದ ಕಾರ್ಯಕ್ಷಮತೆ, ಆಡಿಯೋ ಮತ್ತು ಬ್ಯಾಟರಿಯಲ್ಲಿ ಆಪ್ಟಿಮೈಸೇಶನ್ ಜೊತೆಗೆ ಆಪ್ಟಿಮೈಸ್ಡ್ ಕನೆಕ್ಟಿವಿಟಿ ಮತ್ತು ಲೊಕೇಶನ್ ತಂತ್ರಜ್ಞಾನಗಳನ್ನು ಜಿಯೋಫೋನ್ ನೆಕ್ಸ್ಟ್‌ನಲ್ಲಿರುವ ಕ್ವಾಲ್‌ಕಾಮ್ ಪ್ರಾಸೆಸರ್‌ನ ಒದಗಿಸುತ್ತದೆ. ಇದನ್ನೂ ಓದಿ: ಎಲ್ಲ ಫೋನ್‍ಗಳಿಗೆ, ಎಲೆಕ್ಟ್ರಾನಿಕ್ಸ್ ಸಾಧನಗಳಿಗೆ ಒಂದೇ ಚಾರ್ಜರ್
ಜಿಯೋಫೋನ್ ನೆಕ್ಸ್ಟ್ ವೈಶಿಷ್ಟ್ಯಗಳು:
ವಾಯ್ಸ್ ಅಸಿಸ್ಟೆಂಟ್
ಬಳಕೆದಾರರು ತಮ್ಮ ಸಾಧನವನ್ನು ನಿರ್ವಹಿಸಲು (ಆಪ್ ತೆರೆಯುವುದು, ಸೆಟ್ಟಿಂಗ್‌ಗಳನ್ನು ನಿರ್ವಹಿಸುವುದು ಇತ್ಯಾದಿ) ಮತ್ತು ತಮಗೆ ತಿಳಿದಿರುವ ಭಾಷೆಯಲ್ಲಿ ಅಂತರಜಾಲದಿಂದ ಮಾಹಿತಿ/ಕಂಟೆಂಟ್ ಅನ್ನು ಸುಲಭವಾಗಿ ಪಡೆದುಕೊಳ್ಳಲು ವಾಯ್ಸ್ ಅಸಿಸ್ಟೆಂಟ್ ಸಹಾಯ ಮಾಡುತ್ತದೆ. ಇದನ್ನೂ ಓದಿ: ಜಿಯೋ ಫೋನ್ ನೆಕ್ಸ್ಟ್ ಹೇಗೆ ತಯಾರಾಗುತ್ತಿದೆ? – ತಿರುಪತಿ ಫ್ಯಾಕ್ಟರಿಯ ವಿಡಿಯೋ ರಿಲೀಸ್
ರೀಡ್ ಅಲೌಡ್
ಆಲಿಸುವ (ʼಲಿಸನ್’) ಸೌಲಭ್ಯವು ಯಾವುದೇ ಪರದೆಯ ಮೇಲಿರುವ ವಿಷಯವನ್ನು ಬಳಕೆದಾರರಿಗೆ ಓದಿ ಹೇಳುತ್ತದೆ. ತಮಗೆ ಅರ್ಥವಾಗುವ ಭಾಷೆಯಲ್ಲಿ ಕೇಳುವ ಮೂಲಕ ಕಂಟೆಂಟ್ ಅನ್ನು ಪಡೆದುಕೊಳ್ಳಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.
ಅನುವಾದ
ಅನುವಾದ ಸೌಲಭ್ಯವು ಯಾವುದೇ ಪರದೆಯನ್ನು ಬಳಕೆದಾರರ ಆಯ್ಕೆಯ ಭಾಷೆಗೆ ಅನುವಾದಿಸಲು ಬಳಕೆದಾರರಿಗೆ ಅನುವುಮಾಡಿಕೊಡುತ್ತದೆ. ಇದರಿಂದ ಬಳಕೆದಾರರು ತಮ್ಮ ಆದ್ಯತೆಯ ಭಾಷೆಯಲ್ಲಿ ಯಾವುದೇ ವಿಷಯವನ್ನು ಓದುವುದು ಸಾಧ್ಯವಾಗುತ್ತದೆ.
ಸುಲಭ ಮತ್ತು ಸ್ಮಾರ್ಟ್ ಕ್ಯಾಮೆರಾ
ಈ ಸಾಧನದಲ್ಲಿರುವ ಸ್ಮಾರ್ಟ್ ಮತ್ತು ಶಕ್ತಿಯುತ ಕ್ಯಾಮೆರಾ ಪೋರ್ಟ್ರೇಟ್ ಮೋಡ್‌ನಂತಹ ವಿವಿಧ ಫೋಟೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಅಷ್ಟೇ ಅಲ್ಲದೇ ಇದು ಮಸುಕಾದ ಹಿನ್ನೆಲೆಯಿರುವ ಉತ್ತಮ ಫೋಟೋಗಳನ್ನು ಸ್ವಯಂಚಾಲಿತವಾಗಿ ಸೆರೆಹಿಡಿಯಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೈಟ್ ಮೋಡ್ ನೆರವಾಗುತ್ತದೆ. ಭಾವನೆಗಳು ಮತ್ತು ಹಬ್ಬಗಳ ಜೊತೆಗೂಡಿ ಚಿತ್ರಗಳ ಅಂದ ಹೆಚ್ಚಿಸಲು ಕ್ಯಾಮೆರಾ ಆಪ್‌ನಲ್ಲಿ ವಿಶಿಷ್ಟವಾದ ಭಾರತೀಯ ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್‌ಗಳನ್ನು ನೀಡಲಾಗಿದೆ.
ಪ್ರಿಲೋಡೆಡ್ ಜಿಯೋ ಮತ್ತು ಗೂಗಲ್ ಆಪ್‌ಗಳು
ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾದ ಎಲ್ಲ ಆಂಡ್ರಾಯ್ಡ್ ಆಪ್‌ಗಳನ್ನೂ ಈ ಸಾಧನವು ಬೆಂಬಲಿಸುತ್ತದೆ ಮತ್ತು ಆ ಮೂಲಕ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಲಕ್ಷಾಂತರ ಆಪ್‌ಗಳ ಪೈಕಿ ತಮಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೆ ನೀಡುತ್ತದೆ. ಅನೇಕ ಜಿಯೋ ಮತ್ತು ಗೂಗಲ್ ಆಪ್‌ಗಳನ್ನು ಈ ಸಾಧನದಲ್ಲಿ ಮುಂಚಿತವಾಗಿ ಲೋಡ್ ಮಾಡಲಾಗಿದೆ.
ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಗ್ರೇಡ್
ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಡೇಟ್‌ಗಳೊಂದಿಗೆ ಜಿಯೋಫೋನ್ ನೆಕ್ಸ್ಟ್ ಯಾವಾಗಲೂ ಅಪ್-ಟು-ಡೇಟ್ ಆಗಿರುತ್ತದೆ. ಇತ್ತೀಚಿನ ವೈಶಿಷ್ಟ್ಯಗಳನ್ನು ಸ್ವಯಂಚಾಲಿತವಾಗಿ ಒದಗಿಸಲಾಗುವುದರಿಂದ ಬಳಕೆದಾರರ ಅನುಭವವು ಕಾಲಕ್ರಮೇಣ ಉತ್ತಮಗೊಳ್ಳುತ್ತಲೇ ಇರುತ್ತದೆ. ರೇಜಿಗೆಯಿಲ್ಲದ ಅನುಭವವನ್ನು ಖಾತ್ರಿಪಡಿಸುವುದಕ್ಕಾಗಿ ಭದ್ರತಾ ಅಪ್‌ಡೇಟ್‌ಗಳನ್ನೂ ನೀಡಲಾಗುತ್ತದೆ.
ಅದ್ಭುತ ಬ್ಯಾಟರಿ ಲೈಫ್
ಆಂಡ್ರಾಯ್ಡ್‌ನಿಂದ ಚಾಲಿತವಾದ, ಹೊಸದಾಗಿ ವಿನ್ಯಾಸಗೊಳಿಸಲಾದ ಪ್ರಗತಿ ಓಎಸ್, ದೀರ್ಘಾವಧಿಯ ಬ್ಯಾಟರಿ ಬಾಳಿಕೆಯನ್ನು ಖಚಿತಪಡಿಸುವುದಲ್ಲದೆ ಅತ್ಯುತ್ತಮ ಕಾರ್ಯಕ್ಷಮತೆಯನ್ನೂ ನೀಡುತ್ತದೆ.