ಅಯೋಧ್ಯೆ: ವನವಾಸದಲ್ಲಿ ಶ್ರೀರಾಮ ಮಾಂಸಹಾರ ಸೇವಿಸುತ್ತಿದ್ದ ಎಂಬ ವಿಚಾರ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (Nationalist Congress Party) ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ನೀಡಿದ್ದ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಿತೇಂದ್ರ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಚಾರ್ಯರು, ಅವರ ಮಾತನಾಡುತ್ತಿರುವುದು ಸಂಪೂರ್ಣ ಸುಳ್ಳು, ಭಗವಾನ್ ರಾಮನು ವನವಾಸದ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾನೆ ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಹಣ್ಣುಗಳನ್ನು ಸ್ವೀಕರಿಸುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ
Advertisement
Advertisement
ನಮ್ಮ ದೇವರು ಯಾವಾಗಲೂ ಸಸ್ಯಾಹಾರಿ. ಅವರು ನಮ್ಮ ಭಗವಾನ್ ರಾಮನನ್ನು ಅವಮಾನಿಸಲು ಕೀಳುಮಟ್ಟದ ಮಾತನಾಡುತ್ತಿದ್ದಾರೆ ಎಂದು ಆಚಾರ್ಯರು ಹೇಳಿದ್ದಾರೆ.
Advertisement
Advertisement
ಜಿತೇಂದ್ರ ಅವ್ಹಾದ್ ಅವರು, ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದರು.
ಜಿತೇಂದ್ರ ಅವದ್ ನೀಡಿರುವ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವಹೇಳನಕಾರಿ ಮತ್ತು ರಾಮ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪಿಂಕ್ ಸಿಟಿ ಜೈಪುರದಲ್ಲಿ ಮಾಂಸ, ಮದ್ಯದಂಗಡಿ ಬಂದ್