Bengaluru CityCrimeDistrictsKarnatakaLatestLeading NewsMain Post

ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

ಬೆಂಗಳೂರು: ಉರ್ದು ಭಾಷೆ ಬಾರದಕ್ಕೆ ಚಂದ್ರುವನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಕ್ಕೆ ಬೈಕ್ ಡಿಕ್ಕಿ ಹೊಡೆದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.

ಜೆಜೆ ನಗರ ಪಿಎಸ್ ಕೊಲೆ ಪ್ರಕರಣ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಕಮಲ್ ಪಂತ್ ಅವರು, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5ರ ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಕಾಟನ್‍ಪೇಟೆಯ ಕ್ರಿಶ್ಚಿಯನ್ ಸಮುದಾಯದ ಚಂದ್ರು(22) ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಇವರ ಮತ್ತು ಶಾಹಿದ್ ಓಡಿಸುತ್ತಿದ್ದ ಬೈಕ್‍ಗೆ ಪರಸ್ಪರ ತಗುಲಿದೆ. ಈ ವಿಷಯಕ್ಕೆ ಮೊದಲು ಗಲಾಟೆಗೆ ಪ್ರಾರಂಭವಾಗಿದೆ. ಇದನ್ನೂ ಓದಿ:  ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಆರಗ ಹೇಳಿದ್ದೇನು?
ಚಂದ್ರು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಆರಗ ಜ್ಞಾನೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ್ದು, ಚಂದ್ರು ಹತ್ಯೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಚಂದ್ರುವಿಗೆ ಉರ್ದು ಮಾತಾಡಲು ಬರುತ್ತಿರಲಿಲ್ಲ. ಚಂದ್ರುವಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಅಂತ ಹೇಳಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಚಂದ್ರು ಒಬ್ಬ ದಲಿತ ಯುವಕ. ಕೆಲವರ ಬಂಧನ ಆಗಿದೆ. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ

Leave a Reply

Your email address will not be published. Required fields are marked *

Back to top button