ನವದೆಹಲಿ: ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (Congress-NC) ನೇತೃತ್ವದ ಮೈತ್ರಿಕೂಟ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು (J&K Exit Poll Result) ಹೇಳಿವೆ.
ಇಂಡಿಯಾ ಒಕ್ಕೂಟ ಅಧಿಕಾರ ಹಿಡಿದರೂ ಬಿಜೆಪಿ ಕಳೆದ ಬಾರಿ ಚುನಾವಣಾ ಫಲಿತಾಂಶಕ್ಕಿಂತ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ. 2014ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಿಸಿತ್ತು. ಕಾಂಗ್ರೆಸ್ 12 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿತ್ತು. ಮೆಹಬುಬಾ ಮುಫ್ತಿ ನೇತೃತ್ವದ ಪಿಡಿಪಿ 28 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಆಜ್ ತಕ್ ಸಿ ವೋಟರ್ ಸಮೀಕ್ಷೆಯಲ್ಲಿ ಬಿಜೆಪಿಗೆ ಮುನ್ನಡೆ ಬಂದಿದೆ. ಉಳಿದೆಲ್ಲ ಸಮೀಕ್ಷೆಗಳು ಕಾಂಗ್ರೆಸ್-ಎನ್‌ಸಿ ಮೈತ್ರಿ ಕೂಟಕ್ಕೆ ಮುನ್ನಡೆ ತೋರಿಸಿವೆ. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನ – ಕಾಂಗ್ರೆಸ್ ಅಧಿಕಾರಕ್ಕೆ
Advertisement
Advertisement
ಪ್ರತ್ಯೇಕ ರಾಜ್ಯ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಇದೇ ಅಕ್ಟೋಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಉತ್ತರ ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ – ಹಮಾಸ್ ಟಾಪ್ ಕಮಾಂಡರ್ ಹತ್ಯೆ
Advertisement
ಯಾವ ಸಮೀಕ್ಷೆ ಏನು ಹೇಳುತ್ತೆ?
ಸಿ ವೋಟರ್ – ಆಜ್ ತಕ್
ಕಾಂಗ್ರೆಸ್ + ಎನ್‌ಸಿ – 11-15
ಬಿಜೆಪಿ – 27-31
ಪಿಡಿಪಿ – 02
ಇತರೆ – 01
Advertisement
ದೈನಿಕ್ ಬಾಸ್ಕರ್
ಕಾಂಗ್ರೆಸ್ + ಎನ್‌ಸಿ – 35-40
ಬಿಜೆಪಿ – 20-25
ಪಿಡಿಪಿ – 4-7
ಇತರೆ – 12-16
ಪೀಪಲ್ ಪ್ಲಸ್
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 7-11
ಇತರೆ – 4-6
ಇಂಡಿಯಾ ಟುಡೆ- ಸಿ ವೋಟರ್
ಕಾಂಗ್ರೆಸ್ + ಎನ್‌ಸಿ – 40-48
ಬಿಜೆಪಿ – 27-32
ಪಿಡಿಪಿ – 6-12
ಇತರೆ – 6-11