ಶ್ರೀನಗರ: ಸರ್ಕಾರಿ ಭೂಮಿ (Government Land) ಒತ್ತುವರಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ (Terrorist) ಗುಂಪಿನ ಕಮಾಂಡರ್ ಅಮೀರ್ ಖಾನ್‌ಗೆ (Amir Khan) ಸೇರಿದ ಆಸ್ತಿಯನ್ನು ಜಮ್ಮು ಮತ್ತು ಕಾಶ್ಮೀರ (Jammu and Kashmir) ಆಡಳಿತವು ಬುಲ್ಡೋಜರ್ (Bulldozer) ಬಳಸಿ ಧ್ವಂಸಗೊಳಿಸಿದೆ.
Jammu and Kashmir Administration demolishes property of Hizbul Mujahideen terrorist commander Amir Khan, in Anantnag's Pahalgam pic.twitter.com/x1F28YFwAK
— ANI (@ANI) December 31, 2022
Advertisement
ಇಂದು ಜಮ್ಮು ಮತ್ತು ಕಾಶ್ಮೀರ ಆಡಳಿತವು ಜಂಟಿ ಕಾರ್ಯಾಚರಣೆ ನಡೆಸಿ ಅನಂತನಾಗ್ ಜಿಲ್ಲೆಯ ಪಾಹಲ್ಗಾಮ್ ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲೇ ಆಸ್ತಿಯನ್ನು ಧ್ವಂಸಗೊಳಿಸಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಆಮೀರ್ ಖಾನ್‌ಗೆ ಸೇರಿದ ಮನೆಯ ಕಾಂಪೌಂಡ್ ಅನ್ನು ಧ್ವಂಸಗೊಳಿಸಲಾಗಿದೆ. ಇದನ್ನೂ ಓದಿ: ಟಿಕೆಟ್ ವಿಚಾರದಲ್ಲಿ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ
Advertisement
Advertisement
ಬಳಿಕ ಮಾತನಾಡಿದ ಅಧಿಕಾರಿಗಳು, ಕಣಿವೆ ಪ್ರದೇಶದಲ್ಲಿ ಭಯೋತ್ಪಾದನೆ ಮುಕ್ತಗೊಳಿಸಲು ಮತ್ತು ಸರ್ಕಾರದ ಮೇಲೆ ಜನರಿಗೆ ನಂಬಿಕೆ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಸ್ಯಾಂಡಲ್ ವುಡ್ ಕ್ವೀನ್
Advertisement
ಮೂಲಗಳ ಪ್ರಕಾರ, ಗುಲಾಂ ನಬಿ ಖಾನ್ ಅಲಿಯಾಸ್ ಅಮೀರ್ ಖಾನ್ ಹಿಜ್ಬುಲ್ ಮುಜಾಹಿದ್ದೀನ್‌ನ ಉನ್ನತ ಕಾರ್ಯಾಚರಣೆಯ ಕಮಾಂಡರ್ ಆಗಿದ್ದರು. 90ರ ದಶಕದ ಆರಂಭದಲ್ಲೇ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ತೆರಳಿದ್ದರು ಎಂದು ಹೇಳಲಾಗಿದೆ.