ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ಸುಧಾರಿತ ಸ್ಫೋಟಕ ಸಾಮಾಗ್ರಿ (ಐಇಡಿ) ಪತ್ತೆಯಾಗಿದ್ದು, ಭದ್ರತಾ ಪಡೆಗಳು ಸ್ಫೋಟಕವನ್ನು ನಾಶಪಡಿಸುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.
ಖಚಿತ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆ ದಕ್ಷಿಣ ಕಾಶ್ಮೀರದ ವಾನ್‍ಪೋರಾ ಪ್ರದೇಶದ ನೆವಾ – ಶ್ರೀನಗರ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ಸುಮಾರು 5 ಕೆಜಿ ತೂಕದ ಸುಧಾರಿತ ಸ್ಫೋಟಕ ಸಾಮಾಗ್ರಿ ಪತ್ತೆಯಾಗಿದ್ದು, ಅದನ್ನು ಕಂಟೈನರ್ ಗೆ ಜೋಡಿಸಲಾಗಿತ್ತು. ಭದ್ರತಾ ಪಡೆಗಳು ಇದನ್ನು ಪತ್ತೆ ಹಚ್ಚುವ ಮೂಲಕ ಭಾರೀ ದುರಂತವನ್ನು ತಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
Advertisement
ಪತ್ತೆಯಾಗಿರುವ ಸ್ಫೋಟಕ ಸಾಮಾಗ್ರಿಯನ್ನು ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ತಂಡ ನಾಶಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಲಾಗಿದೆ. ಕಳೆದ ವಾರಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದ್ದು ಉಗ್ರರು ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕರನ್ನು ಗುರಿ ಮಾಡಿ ದಾಳಿ ನಡೆಸುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪುಲ್ವಾಮದ ಬಂಡ್ಜಾವೋದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದು ಪೊಲೀಸ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ದಾಳಿ – ಪೊಲೀಸ್ ಅಧಿಕಾರಿ, ನಾಗರಿಕ ಹತ್ಯೆ
Advertisement
Advertisement
ಬುಧವಾರ ಅನಂತನಾಗ್ ಪಟ್ಟಣದ ಬಿಜ್ಬೆಹಾರ್‍ನಲ್ಲಿ ಸಹಾಯಕ ಸಬ್ ಇನ್‍ಸ್ಪೆಕ್ಟರ್ ಅಧಿಕಾರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಪೊಲೀಸ್ ಅಧಿಕಾರಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟಿದ್ದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ