ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಮಹತ್ವದ ಮೂಲಸೌಕರ್ಯ ಯೋಜನೆಯಾದ ಝಡ್-ಮೋರ್ಹ್ ಸುರಂಗ ಮಾರ್ಗವನ್ನು (Z Morh Tunnel) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ಉದ್ಘಾಟಿಸಿದರು. 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.
Advertisement
ಇಂದು ಬೆಳಗ್ಗೆ ಶ್ರೀನಗರ ವಿಮಾನನಿಲ್ದಾಣದಲ್ಲಿ (Srinagar Airport) ಬಂದಿಳಿದ ಮೋದಿ, ಹೆಲಿಕಾಪ್ಟರ್ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ (Omar Abdullah), ರಾಜ್ಯಪಾಲ ಮನೋಜ್ ಸಿನ್ಹಾ ಇತರ ನಾಯಕರು ಜೊತೆಗಿದ್ದರು. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ – ಲಕ್ಷಾಂತರ ನಾಗ ಸಾಧುಗಳಿಂದ ಶಾಹಿ ಸ್ನಾನ
Advertisement
ಉದ್ಘಾಟನೆ ಬಳಿಕ ಸುರಂಗದ ಒಳಗೆ ತೆರಳಿದ ಮೋದಿ, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಅತ್ಯಂತ ಕಠಿಣ ಹವಾಮಾನದಲ್ಲೂ ಶ್ರಮಪಟ್ಟು ಸುರಂಗ ನಿರ್ಮಿಸಿದ ಕಾರ್ಮಿಕರ ಜೊತೆಯೂ ಮಾತುಕತೆ ನಡೆಸಿದರು. ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಾಂಗೀರ್ ಮತ್ತು ಸೋನಾಮಾರ್ಗ್ ನಡುವಿನ 6.5 ಕಿಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಳಿಗಾಗಿ ಸಮಾನಾಂತರ 7.5 ಮೀಟರ್ ಎಸ್ಕೆಪ್ ಮಾರ್ಗವನ್ನು ನಿರ್ಮಿಸಲಾಗಿದೆ.
Advertisement
ಸಮುದ್ರ ಮಟ್ಟದಿಂದ 8,650 ಅಡಿ ಎತ್ತರದಲ್ಲಿ ನಿರ್ಮಿಸಲಾಗಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ್ ನಡುವೆ ಲೇಹ್‌ಗೆ ಹೋಗುವ ಮಾರ್ಗದಲ್ಲಿ ಎಲ್ಲ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ. ಹೆಚ್ಚಿನ ಭೂಕುಸಿತಗಳು ಮತ್ತು ಹಿಮಕುಸಿತಗಳ ಮಾರ್ಗಗಳನ್ನು ಬೈಪಾಸ್ ಮಾಡುತ್ತದೆ. ಇದನ್ನೂ ಓದಿ: ಮಹಾ ಕುಂಭಮೇಳ ವೈಭವ – ಇಂಚಿಂಚಿಗೂ ಹದ್ದಿನ ಕಣ್ಣು, 2,700 ಎಐ ಕ್ಯಾಮೆರಾ ಕಣ್ಗಾವಲು
Advertisement
ಈ ಮೂಲಕ ಸೋನಾಮಾರ್ಗ್ ಪ್ರದೇಶವನ್ನು ಚಳಿಗಾಲದ ಕ್ರೀಡಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ವಿಶೇಷವಾಗಿ ಸೋನಾಮಾರ್ಗ್ ಅಭಿವೃದ್ಧಿ ಪ್ರಾಧಿಕಾರ (ಎಸ್‌ಡಿಎ) ನಿರ್ಮಿಸಿರುವ ಅತ್ಯಾಧುನಿಕ ಐಸ್-ಸ್ಕೆಟಿಂಗ್ ರಿಂಕ್ ಚಳಿಗಾಲದ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಹೊಸ ಭರವಸೆ ಹುಟ್ಟುಹಾಕಿದೆ.
ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೋನಾಮಾರ್ಗ್ ಬೇಸಿಗೆಯಲ್ಲಿ ಸ್ಥಳೀಯ ಮತ್ತು ಸ್ಥಳೀಯೇತರ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತದೆ. ಪ್ರತಿ ವರ್ಷ ಚಳಿಗಾಲದಲ್ಲಿ ಭಾರೀ ಹಿಮಪಾತದಿಂದಾಗಿ ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ಮುಚ್ಚಿರುತ್ತಿತ್ತು. ಆದ್ರೆ ಈಗ ವರ್ಷಪೂರ್ತಿ ಸಂಚಾರ ಮುಕ್ತವಾಗಿರಲಿದೆ. ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ವೀವ್ ಜಾಬ್ಸ್ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ