ಜಾರ್ಖಂಡ್‌ ಸಿಎಂ ಆಗಿ ಚಂಪೈ ಸೊರೇನ್‌ ಪ್ರಮಾಣವಚನ ಸ್ವೀಕಾರ

Public TV
1 Min Read
Champai Soren

ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ (Jharkhand) ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ (Champai Soren) ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

67 ವಯಸ್ಸಿನ ಚಂಪೈ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ ಅವರಿಗೆ ಆಹ್ವಾನ ನೀಡಿದ್ದರು. ಇದನ್ನೂ ಓದಿ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೋರೆನ್‌ಗೆ 1 ದಿನ ನ್ಯಾಯಾಂಗ ಬಂಧನ

ಗುರುವಾರ ಚಂಪೈ ಸೊರೇನ್ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಲು ಆಹ್ವಾನ ಕೊಟ್ಟಿದ್ದರು. ರಾಜ್ಯದಲ್ಲಿ 18 ಗಂಟೆಗಳ ಕಾಲ ಯಾವುದೇ ಸರ್ಕಾರವಿಲ್ಲ. ಗೊಂದಲದ ಪರಿಸ್ಥಿತಿ ಇದೆ. ಸಾಂವಿಧಾನಿಕ ಮುಖ್ಯಸ್ಥರಾಗಿರುವ ನೀವು ಶೀಘ್ರದಲ್ಲೇ ಜನಪ್ರಿಯ ಸರ್ಕಾರ ರಚನೆಗೆ ಕ್ರಮಗಳನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ರಾಜ್ಯಪಾಲರು ಹೇಳಿದ್ದರು.

ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.

Hemant Soren

ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರು ಶಾಸಕರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಂದು ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಇದನ್ನೂ ಓದಿ: ಹೇಮಂತ್‌ ಸೋರೆನ್‌ ತಂದೆಯೂ ಹಿಂದೆ ಜೈಲುಪಾಲು!

ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಉನ್ನತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಅವರು 600 ಕೋಟಿ ರೂ. ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

Share This Article