ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್‌ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ. ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
Advertisement
ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಂದಿಸಿ, ಅನುಚಿತವಾಗಿ ವರ್ತಿಸಿದರು. ಈಗ ಸಂಸ್ಥೆಯ ಸ್ಥಿತಿ ಹೀಗಿದೆ, ಈ ಹಿಂದೆ 17 ಸಿಬ್ಬಂದಿ ಇದ್ದರು. ಈಗ 4 ಸಿಬ್ಬಂದಿ ಇದ್ದಾರೆ. ವಿದ್ಯಾರ್ಥಿಗಳು 2 ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಬಿವಿಪಿ ಜೆಎನ್‌ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: 8 ತಿಂಗಳ ಗರ್ಭಿಣಿಯನ್ನು ಒದ್ದ ಟಿಎಂಸಿ ಶಾಸಕನ ಬೆಂಬಲಿಗರು
Advertisement
Advertisement
ಅಧಿಕಾರಿಗಳು ಆಗಾಗ ಅನುಚಿತವಾಗಿ ವರ್ತಿಸುತ್ತಾರೆ, ಸುಳ್ಳು ಹೇಳುತ್ತಾರೆ. ನಾವು ಎಷ್ಟು ಕಾದರೂ ನಮಗೆ ಪರಿಹಾರ ನೀಡುವುದಿಲ್ಲ. ನಮಗೆ ಸ್ಕಾಲರ್‌ಶಿಪ್ ಹಣ ಬಿಡುಗಡೆಯಾಗುವವರೆಗೂ ಕಚೇರಿಯಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ವಿಳಂಬ – ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್
Advertisement
ಸಂಘರ್ಷದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ಸಂಘರ್ಷ ಕಂಡುಬಂದಿದೆ. ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಸಿಬ್ಬಂದಿ ತಳ್ಳುವ ಹಾಗೂ ತಡೆಯುವುದು ಕಾಣಿಸಿಕೊಂಡಿದೆ.