Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Bengaluru City

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
Last updated: February 24, 2026 8:11 pm
Public TV
Share
4 Min Read
Siddaramaiah 5
SHARE

– ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಹುದ್ದೆ ಖಾಲಿಯಿತ್ತು

ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ನೇಮಕ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗ ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು (Jobs) ನಡೆಸಲಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ (Dharwad student Protest) ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಮಾಡಿ ತಮ್ಮ ಸರ್ಕಾರವನ್ನು ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ ಅತ್ಯಂತ ಮಹತ್ವದ್ದಾಗಿದೆ.

ನಾವು ಅಧಿಕಾರಕ್ಕೆ ಬಂದಾಗ 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ.

 

ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ… pic.twitter.com/XSYpyug8UJ

— Siddaramaiah (@siddaramaiah) February 24, 2026

 

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿಯನ್ನು ಉಂಟುಮಾಡಲು ಹೊರಟಿರುವ ವಿಪಕ್ಷ ನಾಯಕರ ನಡೆ ಖಂಡನೀಯ.

ಇಂದಿನ ಈ ದುಸ್ಥಿತಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ 2019ರಿಂದ 2023ರವರೆಗಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಕಾರಣ. ಇದು ಯುವಜನರು ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದ್ದು ಮಾತ್ರವಲ್ಲ, ದೊಡ್ಡ ಪ್ರಮಾಣದ ಖಾಲಿ ಹುದ್ದೆಗಳ ಸೃಷ್ಟಿಗೆ ಕಾರಣವಾಯಿತು. ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆ, ಪಾರದರ್ಶಕತೆ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಬದ್ಧವಾಗಿದೆ. ಇದನ್ನೂ ಓದಿ: ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

ಇದೇ ವೇಳೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದ ಕಾರಣದಿಂದ ಹಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಸಂವಿಧಾನದ ಪಾಲನೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಸರ್ಕಾರವಾಗಿ, ಸಾವಿರಾರು ಅಭ್ಯರ್ಥಿಗಳ ವೃತ್ತಿಜೀವನಕ್ಕೆ ಧಕ್ಕೆ ತರುವಂತಹ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳದೆ ಕಾನೂನಿನ ಚೌಕಟ್ಟಿನೊಳಗೆ ಜವಾಬ್ದಾರಿಯುತವಾಗಿ ವರ್ತಿಸಲು ನಾವು ನಿರ್ಧರಿಸಿದ್ದೇವೆ.

ಈ ರಚನಾತ್ಮಕ ಮತ್ತು ಕಾನೂನು ಅಡೆತಡೆಗಳ ಹೊರತಾಗಿಯೂ, ನಮ್ಮ ಸರ್ಕಾರವು ದೃಢಸಂಕಲ್ಪ ಮತ್ತು ಪ್ರಾಮಾಣಿಕತೆಯಿಂದ ಮುಂದುವರಿದಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡಸಲಾಗಿದೆ. ವರ್ಷಗಳ ಕಾಲ ಕಾಯಬೇಕಾದ ಅನೇಕ ಅಭ್ಯರ್ಥಿಗಳ ಕಷ್ಟವನ್ನು ನಾವು ಅರಿತಿದ್ದೇವೆ. ಈ ಕಷ್ಟವನ್ನು ಗುರುತಿಸಿ, ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲಾಗಿದೆ. ಇದರಿಂದ ನೇಮಕಾತಿಯಲ್ಲಾದ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗದಂತೆ ತಡೆಯಲಾಗಿದೆ.

ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಪಾರದರ್ಶಕ, ವ್ಯವಸ್ಥಿತ ಮತ್ತು ಕಾಲಮಿತಿಯೊಳಗೆ ಇವೆಲ್ಲವನ್ನು ಭರ್ತಿ ಮಾಡಲಾಗುವುದು ಎಂಬ ವಾಗ್ದಾನ ನೀಡುತ್ತಿದ್ದೇನೆ. ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗಾಗಿ ಎಲ್ಲಾ ಅಗತ್ಯ ಆಡಳಿತಾತ್ಮಕ ಮತ್ತು ನೀತಿ ನಿರೂಪಣೆ ಮಾನದಂಡಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳು ಬಾಕಿ ಉಳಿಯದಂತೆ ತಡೆಯಲು ನೇಮಕಾತಿ ಸಂಸ್ಥೆಗಳನ್ನು ಬಲಪಡಿಸಲಾಗುತ್ತಿದೆ.

ಇದು ಕೇವಲ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು ಮಾತ್ರವಲ್ಲ; ಆಡಳಿತ ಯಂತ್ರದ ಸಾಮರ್ಥ್ಯವನ್ನು ಮರು ನಿರ್ಮಾಣ ಮಾಡುವುದು, ನೇಮಕಾತಿಯಲ್ಲಿ ನ್ಯಾಯವನ್ನು ಮರುಸ್ಥಾಪಿಸುವುದು ಮತ್ತು ಪ್ರತಿ ಅರ್ಹ ಅಭ್ಯರ್ಥಿಗೆ ಸಮುದಾಯ ಅಥವಾ ಪ್ರದೇಶದ ಬೇಧಭಾವವಿಲ್ಲದೆ ಸಮಾನ ಅವಕಾಶವನ್ನು ಖಚಿತಪಡಿಸುವುದಾಗಿದೆ.

 

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರಲ್ಲಿ ನನ್ನದೊಂದು ಮನವಿ; ನಿಮ್ಮ ಶಿಕ್ಷಣ, ಕೌಶಲ್ಯ ಮತ್ತು ಪೂರ್ವತಯಾರಿಯ ಮೇಲೆ ಆತ್ಮವಿಶ್ವಾಸ ಮತ್ತು ಭರವಸೆಯನ್ನಿಡಿ. ನಾಡಿನ ಯುವಜನರೇ ನಮ್ಮ ಭವಿಷ್ಯದ ವಾಸ್ತುಶಿಲ್ಪಿಗಳು. ನಮ್ಮ ಸರ್ಕಾರ ನಿಮ್ಮೊಂದಿಗೆ ದೃಢವಾಗಿ ನಿಂತಿದೆ, ಮುಂದೆಯೂ ನಿಲ್ಲಲಿದೆ. ಇದು ಬರೀ ಬಾಯಿಮಾತಲ್ಲ, ನಮ್ಮ ನಡೆಯಲ್ಲಿಯೂ ಇದನ್ನು ಪಾಲಿಸುತ್ತಿದ್ದೇವೆ.

ಸರ್ಕಾರಿ ಉದ್ಯೋಗ ಪಡೆಯಬೇಕು, ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸಬೇಕು ಎಂಬ ಕನಸು ಹೊತ್ತಿರುವ ಪ್ರತಿಯೊಬ್ಬ ಉದ್ಯೋಗಾಕಾಂಕ್ಷಿಯ ಆಸೆ – ಆಕಾಂಕ್ಷೆಯನ್ನು ರಕ್ಷಿಸಿ, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ.

TAGGED:DharwadasiddaramaiahStudent Protestಧಾರವಾಡಪ್ರತಿಭಟನೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
11 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
22 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
22 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
40 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
51 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?