ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನವಾದ ಇಂದು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ (Protest) ನಡೆಸಿದ ಉದ್ಯೋಗಾಕಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದ್ದಾರೆ.
ಸಮಾನ ಮನಸ್ಕರ ತಂಡ, ರೈತ ಸಂಘಟನೆ ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕಾಗಿ ಪೊಲೀಸರ ಅನುಮತಿಯನ್ನೂ ಕೇಳಿದ್ದರು. ಅಂಬೇಡ್ಕರ್ ಜಯಂತಿ ಹಿನ್ನೆಲೆ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಅನೇಕರು ಧಾರವಾಡದ (Dharwad) ಜಯನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಪೊಲೀಸರು ಹಲವು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದು ಕರೆದೊಯ್ದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ; ಕೆಲಕಾಲ ಆತಂಕ

ಇದರಿಂದ ಕೆರಳಿದ ಉದ್ಯೋಗಾಕಾಂಕ್ಷಿಗಳು ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್
ಪೊಲೀಸರು ಬಂಧಿಸಿ ಕರೆದೊಯ್ದವರನ್ನ ಕೂಡಲೇ ಬಿಡುಗಡೆ ಮಾಡಬೇಕು. ಸಂವಿಧಾನ ಕೊಟ್ಟ ಅಂಬೇಡ್ಕರ್ ದಿನಾಚರಣೆಯಂದೇ ನಮ್ಮ ಹಕ್ಕು ಕೇಳುವುದು ತಪ್ಪಾ? ಬ್ರಿಟೀಷರ ಕಾಲವೇ ಉತ್ತಮವಾಗಿತ್ತು. ಆಗ ಪ್ರತಿಭಟನೆ ಮಾಡಲು ಯಾವುದೇ ಅನುಮತಿ ಬೇಕಾಗಿರಲಿಲ್ಲ. ಈಗ ಪ್ರತಿಭಟನೆ ಮಾಡಲು ಅನುಮತಿ ಕೇಳುವ ಕಾಲ ಬಂದಿದೆ ಎಂದು ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

