ಬೆಳಗಾವಿ: ಬೆಳಗಾವಿಯ ಉದ್ಯಮ್ ಬಾಗ್‍ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
Advertisement
ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಓಲಾ, ಎಚ್‍ಪಿ ಸೇರಿದಂತೆ 34 ಕಂಪನಿಗಳು ಈಗಾಗಲೇ ಮೇಳದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಇನ್ನೂ 70 ಕಂಪನಿಗಳು ಉತ್ಸುಕವಾಗಿವೆ. ಮೇಳವು ಸಂಪೂರ್ಣ ವಾಗಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ‘ಸ್ಕಿಲ್ ಕನೆಕ್ಟ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಟೀಕೆ
Advertisement
Advertisement
ನೋಂದಣಿ ಮಾಡಿಕೊಂಡ ನಂತರ ಉದ್ಯೋಗದ ಸ್ವರೂಪ, ಯಾವ ಕಂಪನಿಯು ಅಭ್ಯರ್ಥಿಯನ್ನು ಸಂದರ್ಶಿಸಲಿದೆ ಎನ್ನುವ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುವುದು. ಡಿ.23ರಂದು ನಡೆಯುವ ಮೊದಲ ಸುತ್ತಿನ ಸಂದರ್ಶನದಲ್ಲಿ ಆಯ್ಕೆಯಾಗುವವರಿಗೆ ಮರು ದಿನವಾದ ಡಿ.24 ರಂದು ಎರಡನೇ ಸುತ್ತಿನ ಸಂದರ್ಶನ ನಡೆಯಲಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್: ನಿರಾಣಿ
Advertisement
ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳಿಗೆ ಏನು ಕೊರತೆ ಇದೆ ಎನ್ನುವುದನ್ನು ಕಂಡುಕೊಂಡು, ಅಂತಹವರಿಗೆ ಸೂಕ್ತ ಮತ್ತು ಅಗತ್ಯ ಕೌಶಲ್ಯ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು. 80 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ 40 ಸಾವಿರ ಜನರಲ್ಲಿ ಸರಿಯಾದ ಕೌಶಲ್ಯಗಳೇ ಇಲ್ಲ. ಈ ಕೊರತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್