ಚಂಡೀಗಢ: 2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಗೆಲವು ಸಾಧಿಸಿದ್ದಾರೆ. ಇವರ ಅವರ ತಾಯಿ ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪಂಜಾಬ್‍ನಲ್ಲಿ ತನ್ನ ಮಗ ಗೆದ್ದ ನಂತರವೂ ಬಲ್ದೇವ್ ಕೌರ್ ಅವರು ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ. ಉಗೋಕೆ ಅವರ ತಂದೆ ದರ್ಶನ್ ಸಿಂಗ್ ಚಾಲಕರಾಗಿದ್ದಾರೆ. ಅವರು ಸಹ ನಮ್ಮ ಕುಟುಂಬವು ಹಿಂದಿನ ರೀತಿಯಲ್ಲಿಯೇ ಮುಂದುವರಿಯುತ್ತದೆ. ಮಗ ಶಾಸಕರಾದ ನಂತರ ಹೆಚ್ಚೇನೂ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಮ್ಮನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರೇ ತಿರಸ್ಕಾರ ಮಾಡಿದ್ದಾರೆ: ಸಿದ್ದು ಕಾಲೆಳೆದ ಬಿಜೆಪಿ
Advertisement
ಬಲ್ದೇವ್ ಕೌರ್ ಮಾತನಾಡಿ, ನಾವು ಬಹಳ ಹಿಂದಿನಿಂದಲೂ ಹಣ ಸಂಪಾದಿಸಲು ಕಷ್ಟಪಟ್ಟು ಶ್ರಮಿಸಿದ್ದೇವೆ. ನನ್ನ ಮಗ ಈಗ ಶಾಸಕನಾಗಿದ್ದಾನೆ. ಆತ ಗೌರವಾನ್ವಿತ ಸ್ಥಾನ ಪಡೆದರೂ, ನನ್ನ ಹಳೆಯ ಕಾಯಕವನ್ನು ನಾನು ಮುಂದುವರೆಸುತ್ತೇನೆ. ನಾನು ಶಾಲೆಯಲ್ಲಿ ಈಮುನ್ನ ನಿರ್ವಹಿಸುತ್ತಿದ್ದ ಕರ್ತವ್ಯವನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.
Advertisement
Advertisement
ತಮ್ಮ ಮಗನ ಗೆಲುವು ತಮ್ಮ ಜೀವನದ ಪ್ರಮುಖ ಭಾಗವಾಗಿದೆ ಎಂದು ಅವರು ಖುಷಿಗೊಂಡಿದ್ದಾರೆ. ಅಲ್ಲದೇ ಅವರಿಗೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಿದ್ದ ತಮ್ಮ ಮಗ ಗೆಲ್ಲುತ್ತಾನೆ ಎಂದು ಭಾರೀ ವಿಶ್ವಾಸ ಇತ್ತು. ಲಭ್ ಸಿಂಗ್ ಉಗೋಕೆ ಆಮ್ ಆದ್ಮಿ ಪಕ್ಷದಿಂದ ಗೆಲುವು ಸಾಧಿಸಿದ್ದಾರೆ. ಎಎಪಿ ಅಭ್ಯರ್ಥಿಯಾಗಿ ಪಕ್ಷದ ಚಿಹ್ನೆ ಪೊರಕೆಯಾಗಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷಾಂತರ ಕೇವಲ ಊಹಾಪೋಹ: ಬೊಮ್ಮಾಯಿ
Advertisement
ಪಂಜಾಬ್‍ನ ಭದೌರ್ ವಿಧಾನಸಭಾ ಕ್ಷೇತ್ರದಲ್ಲಿ 37,550 ಮತಗಳ ಅಂತರದಿಂದ ಲಭ್ ಸಿಂಗ್ ಉಗೋಕೆ, ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಚರಂಜಿತ್ ಸಿಂಗ್ ಚನ್ನಿ ಅವರ ಸೋಲಿಸಿದ್ದಾರೆ. ಈಮೂಲಕ ಮಗ ಶಾಸಕನಾದರೂ ತಮ್ಮ ಮೊದಲಿನ ಕೆಲಸವನ್ನೇ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ.