ಲಕ್ನೋ: ಕಾಂಗ್ರೆಸ್‌ನ (Congress) ಭಾರತ್ ಜೋಡೋ ಯಾತ್ರೆ (Bharat Jodo Yatra) ಉತ್ತರ ಪ್ರದೇಶದಲ್ಲಿ 9 ದಿನಗಳ ಚಳಿಗಾಲದ ವಿರಾಮ ಪಡೆದು ಇಂದು ಮತ್ತೆ ಪುನರಾರಂಭವಾಗುತ್ತಿದೆ.
ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆ 110 ದಿಗಳಿಗಿಂತಲೂ ಹೆಚ್ಚು ಕಳೆದಿದ್ದು, ಸುಮಾರು 2,000 ಕಿ.ಮೀ ಕ್ರಮಿಸಿದೆ. ದಕ್ಷಿಣದ ರಾಜ್ಯದಿಂದ ಪ್ರಾರಂಭವಾದ ಪಾದಯಾತ್ರೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಹೊರಟು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಸಂಚರಿಸಿದೆ.
Advertisement
Advertisement
ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲೇ ಯಾವುದೇ ಭಾರತೀಯ ರಾಜಕಾರಣಿ ನಡೆಸಿರುವ ಅತಿ ಉದ್ದದ ಮೆರವಣಿಗೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜನವರಿ 26 ರಂದು ಯಾತ್ರೆ ಶ್ರೀನಗರ ತಲುಪಲಿದ್ದು, ಅಲ್ಲಿ ಕೊನೆಗೊಳ್ಳಲಿದೆ.
Advertisement
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸಿದ ಬಳಿಕ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಗುರಿಯನ್ನು ರಾಹುಲ್ ಗಾಂಧಿ ಹೊಂದಿದ್ದಾರೆ. ದೇಶಾದ್ಯಂತ ಯಾತ್ರೆಯ ಸಂದೇಶವನ್ನು ಹರಡುವ ಉದ್ದೇಶದಿಂದ ‘ಹಾಥ್ ಸೆ ಹಾಥ್ ಜೋಡೋ’ (Haath Se Haath Jodo) ಅಭಿಯಾನವನ್ನು (Campaign) ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್ ಮಾಡಿ ಪ್ರಧಾನಿ ಮೋದಿ ಸಂತಾಪ
Advertisement
ಮೂಲಗಳ ಪ್ರಕಾರ ರಾಹುಲ್ ಸಹೋದರಿ, ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೇಶಾದ್ಯಂತ ‘ಹಾಥ್ ಸೆ ಹಾಥ್ ಜೋಡೋ’ ಅಭಿಯಾನವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಮುಖ್ಯವಾಗಿ ಮಹಿಳೆಯರನ್ನು ಕೇಂದ್ರೀಕರಿಸುವುದು ಇದರ ಉದ್ದೇಶವಾಗಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ಭಾರತ್ ಜೋಡೋ ಯಾತ್ರೆಯ ಬಳಿಕ ಕಾಂಗ್ರೆಸ್ 2 ತಿಂಗಳ `ಹಾಥ್ ಸೆ ಹಾಥ್’ ಜೋಡೋ ಅಭಿಯಾನ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರಿಗೆ ಸಂಬಂಧಿಸಿದ ಇತರ ಸಮಸ್ಯೆಗಳು ಕೂಡ ಅಭಿಯಾನದಲ್ಲಿ ಪ್ರಮುಖ ವಿಷಯವಾಗಿರಲಿದೆ. ದೇಶದ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಭಾಗವನ್ನು ಒಳಗೊಂಡಿರುವ ಮಹಿಳಾ ಮತದಾರರನ್ನು ಓಲೈಸುವ ಗುರಿಯನ್ನು ಪಕ್ಷ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ