ವಾಷಿಂಗ್ಟನ್: ರಷ್ಯಾ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್‌ಗೆ ಭದ್ರತಾ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.
ಉಕ್ರೇನ್‌ಗೆ ತುರ್ತು ರಕ್ಷಣಾ ನೆರವಾಗಿ 4,503 ಕೋಟಿ ರೂ. (600 ಮಿಲಿಯನ್ ಡಾಲರ್) ನೀಡುವುದಾಗಿ ಶನಿವಾರ ಜೋ ಬೈಡೆನ್ ತಿಳಿಸಿದ್ದಾರೆ.
Advertisement
Advertisement
1961ರ ವಿದೇಶಿ ನೆರವು ಕಾಯಿದೆಯಡಿ ರಕ್ಷಣಾ ಇಲಾಖೆಯ ಸೇವೆಗಳು, ಉಪಕರಣ ಖರೀದಿ, ಮಿಲಿಟರಿ ಶಿಕ್ಷಣ ಮತ್ತು ತರಬೇತಿಗಾಗಿ 2,626 ಕೋಟಿ ರೂ. ಹಾಗೂ ಒಟ್ಟು ನೆರವಿಗಾಗಿ 1,876 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು
Advertisement
ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ರಷ್ಯಾ ಸೇನೆ ಮತ್ತು ಕ್ಷಿಪಣಿಗಳು ಉಕ್ರೇನ್ ಮೇಲೆ ದಾಳಿ ನಡೆಸಿತು. ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಯೂರೋಪ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.
Advertisement
ಉಕ್ರೇನ್ ಮೇಲೆ ಸತತ ಮೂರನೇ ದಿನವೂ ರಷ್ಯಾ ದಾಳಿ ಮುಂದುವರಿಸಿದೆ. ಉಕ್ರೇನ್‌ನಲ್ಲಿ ಈವರೆಗೆ 198 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ರಷ್ಯಾ ಸೇನಾ ಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರವೇಶಿಸಿದ್ದು, ಬೃಹತ್ ಕಟ್ಟಡಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ: ಐಫೆಲ್ ಟವರ್‌ನಲ್ಲಿ ಉಕ್ರೇನ್ ರಾಷ್ಟ್ರೀಯ ವರ್ಣ ಬೆಳಗಿಸಿ ಫ್ರಾನ್ಸ್ ಅಭಯ